ಹಳೆ ಪಿಂಚಣಿ ಯೋಜನೆ ಜಾರಿಗೆ ಆಗ್ರಹ

7

ಹಳೆ ಪಿಂಚಣಿ ಯೋಜನೆ ಜಾರಿಗೆ ಆಗ್ರಹ

Published:
Updated:

ಬೆಂಗಳೂರು: ನೂತನ ಪಿಂಚಣಿ ನೀತಿಯನ್ನು (ಎನ್‍ಪಿಎಸ್) ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಒತ್ತಾಯಿಸಿದೆ.

‘ಸರ್ಕಾರಿ ನೌಕರರಿಗೆ ವೃದ್ಧಾಪ್ಯದಲ್ಲಿ ಪಿಂಚಣಿ ದೊರೆಯದೆ ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಎನ್‍ಪಿಎಸ್‌ನಿಂದಾಗಿ 1.75 ಲಕ್ಷ ನೌಕರರಿಗೆ ಅನನುಕೂಲವಾಗಲಿದೆ’ ಎಂದು ಸಂಘದ ಅಧ್ಯಕ್ಷ ಎಚ್.ಕೆ.ರಾಮು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ನೌಕರರು ತಮ್ಮ ಸೇವಾ ಅವಧಿಯಲ್ಲಿ ಸಂಗ್ರಹಿಸಿಟ್ಟ ಹಣವನ್ನು ನಿವೃತ್ತಿಯ ನಂತರ ನೀಡಿದರೆ ಅವರಿಗೆ ಅನುಕೂಲವಾಗಲಿದೆ. ಹೀಗಾಗಿ ಎನ್‍ಪಿಎಸ್ ರದ್ದತಿ ಸಂಬಂಧ ರಚಿತವಾಗಿರುವ ಅಧಿಕಾರಿಗಳ ಸಮಿತಿಯು ಹಳೆ ಪಿಂಚಣಿ ನೀತಿಯನ್ನೇ ಜಾರಿಗೊಳಿಸಲು ಸರ್ಕಾರಕ್ಕೆ ವರದಿ ಸಲ್ಲಿಸಬೇಕು’ ಎಂದು ಮನವಿ ಮಾಡಿದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !