ಭಾನುವಾರ, ಜೂಲೈ 5, 2020
28 °C
ಆವರ್ತನಿಧಿ ವಂಚನೆ ಪ್ರಕರಣ

ಪ್ರಾಸಿಕ್ಯೂಷನ್‌ಗೆ ಒಪ್ಪಿಗೆ ಕೇಳಿದ ಗೃಹ ಇಲಾಖೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಕೃಷಿ ಮಾರಾಟ ಮಂಡಳಿಯ ₹ 48 ಕೋಟಿ ಎಫ್‌ಡಿ ಹಣವನ್ನು ಬೇರೆ ಖಾತೆಗಳಿಗೆ ವರ್ಗಾಯಿಸಿ ದುರ್ಬಳಕೆ ಮಾಡಲಾಗಿದೆ ಎನ್ನಲಾದ ಪ್ರಕರಣದಲ್ಲಿ ಮಂಡಳಿಯ ಉಪ ಪ್ರಧಾನ ವ್ಯವಸ್ಥಾಪಕ ಸಿದ್ದಗಂಗಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ಗೃಹ ಇಲಾಖೆಯು ಸಹಕಾರ ಇಲಾಖೆಯ ಅನುಮತಿ ಕೇಳಿದೆ.

ಅಪರಾಧ ದಂಡ ಪ್ರಕ್ರಿಯಾ ಸಮಿತಿ (ಸಿಆರ್‌ಪಿಸಿ) 197ನೇ ಸೆಕ್ಷನ್‌ ಅಡಿಯಲ್ಲಿ ಸಿದ್ದಗಂಗಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ಕೊಡುವಂತೆ ಕೇಳಿ ಟಿಪ್ಪಣಿ ರವಾನಿಸಲಾಗಿದೆ. 

ಪ್ರಕರಣದಲ್ಲಿ ಸಿದ್ದಗಂಗಯ್ಯ, ಸಿಂಡಿಕೇಟ್‌ ಬ್ಯಾಂಕಿನ ಉತ್ತರಹಳ್ಳಿ ಶಾಖೆಯ ವ್ಯವಸ್ಥಾಪಕ ಮಂಜುನಾಥ್ ಸೇರಿ 12 ಮಂದಿ ವಿರುದ್ಧ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಕೋರ್ಟ್‌ಗೆ ಈಗಾಗಲೇ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಉತ್ತರಹಳ್ಳಿ ಶಾಖೆಯ ಸಹಾಯಕ ವ್ಯವಸ್ಥಾಪಕ, ನಿವೃತ್ತ ಖಜಾನೆ ಅಧಿಕಾರಿ ಲಕ್ಷ್ಮಯ್ಯ ಅವರನ್ನೂ ಆರೋಪಿಗಳಾಗಿ ಹೆಸರಿಸಲಾ
ಗಿದೆ. ಎಲ್ಲ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಆಂಧ್ರ ಬ್ಯಾಂಕ್‌ ರಾಜಾಜಿನಗರ ಶಾಖೆಯಿಂದ ಕೃಷಿ ಆವರ್ತ ನಿಧಿಯಲ್ಲಿ ₹ 100 ಕೋಟಿಯನ್ನು ಆರ್‌ಟಿಜಿಎಸ್‌ ಮೂಲಕ ಸಿಂಡಿಕೇಟ್ ಬ್ಯಾಂಕ್‌ ಉತ್ತರಹಳ್ಳಿ ಶಾಖೆಗೆ ವರ್ಗಾಯಿಸಿ ತಲಾ ₹ 50 ಕೋಟಿಯಂತೆ ಎರಡು ನಿಶ್ಚಿತ ಠೇವಣಿ ಇಡಲಾಗಿತ್ತು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು