19ಕ್ಕೆ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ?

7

19ಕ್ಕೆ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ?

Published:
Updated:

ಬೆಳಗಾವಿ: ವಿಧಾನ ಪರಿಷತ್‌ ಉಪಸಭಾಪತಿ ಸ್ಥಾನಕ್ಕೆ ಬುಧವಾರ (ಇದೇ 19) ಚುನಾವಣೆ ನಡೆಯುವ ಸಾಧ್ಯತೆ ಇದೆ.

ಸಭಾಪತಿ ಸ್ಥಾನಕ್ಕೆ ಎಸ್‌.ಆರ್.ಪಾಟೀಲ ಅವರನ್ನು ನೇಮಿಸಲು ಮೈತ್ರಿ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಒಲವು ತೋರಿದ್ದರು. ಆದರೆ, ಮೂಲ ಕಾಂಗ್ರೆಸಿಗರು ಒಗ್ಗಟ್ಟು ಪ್ರದರ್ಶಿಸಿ ಪ್ರತಾಪಚಂದ್ರ ಶೆಟ್ಟಿ ಅವರನ್ನು ಹುರಿಯಾಳನ್ನಾಗಿ ಮಾಡಿದ್ದರು. ಸಭಾಪತಿ ಸ್ಥಾನ ಕಾಂಗ್ರೆಸ್‌ ಪಾಲಾಗಿದೆ. ಹೀಗಾಗಿ, ಉಪಸಭಾಪತಿ ಸ್ಥಾನ ಜೆಡಿಎಸ್‌ಗೆ ಒಲಿಯಲಿದೆ.

ಪಕ್ಷದ ಕೆ.ಟಿ.ಶ್ರೀಕಂಠೇಗೌಡ ಹಾಗೂ ಚೌಡರೆಡ್ಡಿ ತೂಪಲ್ಲಿ ಈ ಹುದ್ದೆಗೆ ಪ್ರಬಲ ಆಕಾಂಕ್ಷಿಗಳಾಗಿದ್ದರು. ಶ್ರೀಕಂಠೇಗೌಡ ಅವರಿಗೆ ಹುದ್ದೆ ಒಲಿಯುವ ಸಾಧ್ಯತೆ ಇದೆ. ತೂಪಲ್ಲಿ ಅವರನ್ನು ‍ಪರಿಷತ್‌ನ ಮುಖ್ಯ ಸಚೇತಕರನ್ನಾಗಿ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !