ಶನಿವಾರ, ಮೇ 21, 2022
28 °C

ಶಾಸಕ ಜಮೀರ್‌ ವಿರುದ್ಧ ಅವಹೇಳನಕಾರಿ ಪೋಸ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

B. Z. Zameer Ahmed Khan

ಬೆಂಗಳೂರು: ಚಾಮರಾಜಪೇಟೆ ಶಾಸಕ ಬಿ.ಝಡ್‌. ಜಮೀರ್‌ ಅಹಮದ್‌ ಖಾನ್‌ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿರುವ ಬಗ್ಗೆ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಪೋಸ್ಟ್ ಬಗ್ಗೆ ಮೊಹಮ್ಮದ್ ಆಯೂಬ್ ಪಾಷಾ ಎಂಬುವರು ದೂರು ನೀಡಿದ್ದಾರೆ. ಪೋಸ್ಟ್ ಪ್ರಕಟಿಸಿದ್ದಾರೆ ಎನ್ನಲಾದ ಶರತ್ ಐಟಿಐಹಾಗೂ ಋಷಿಕುಮಾರ್ ಎಂಬುವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಅವಹೇಳನಕಾರಿ ಪೋಸ್ಟ್‌ನಿಂದಾಗಿ ಶಾಸಕ ಜಮೀರ್ ಅಹಮದ್ ಖಾನ್ ಗೌರವಕ್ಕೆ ಧಕ್ಕೆ ಉಂಟಾಗಿದೆ. ಮುಸ್ಲಿಂ ಸಮುದಾಯದವರನ್ನು ಪ್ರಚೋದಿಸುವ ಪೋಸ್ಟ್ ಇದಾಗಿರುವುದಾಗಿ ಅಯೂಬ್ ಪಾಷಾ ಆರೋಪಿಸಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು