ಭಾನುವಾರ, ಜನವರಿ 19, 2020
20 °C

ತೀರ್ಥಹಳ್ಳಿ: ಮಂಗನ ಕಾಯಿಲೆ ವೈರಾಣು ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತೀರ್ಥಹಳ್ಳಿ: ಬೇಸಿಗೆ ಆರಂಭಕ್ಕೂ ಮುನ್ನ ತಾಲ್ಲೂಕಿನ ಅನೇಕ ಕಡೆಗಳಲ್ಲಿ ಮಂಗಗಳ ಮೃತ ದೇಹಗಳು ಪತ್ತೆಯಾಗುತ್ತಿವೆ. ಮಂಡಗದ್ದೆ ಹೋಬಳಿ ಹೆಮ್ಮಕ್ಕಿ ಗ್ರಾಮದ 50 ವರ್ಷದ ನರಸಿಂಹ ಅವರ ದೇಹದಲ್ಲಿ ಮಂಗನ ಕಾಯಿಲೆ ರೋಗದ ವೈರಾಣು ಪತ್ತೆಯಾಗಿದ್ದು, ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿದೆ.

ತೀವ್ರ ಜ್ವರ ಕಾಣಿಸಿಕೊಂಡಿದ್ದ ನರಸಿಂಹ ಅವರು ತೀರ್ಥಹಳ್ಳಿ ಜೆ.ಸಿ ಆಸ್ಪತ್ರೆಗೆ ದಾಖಲಾಗಿದ್ದರು. ಹೆಚ್ಚಿನ ಚಿಕಿತ್ಸೆಗೆ ಮಣಿಪಾಲಕ್ಕೆ ಕಳುಹಿಸಿಕೊಡಲಾಗಿದೆ ಎಂದು ಜೆ.ಸಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಅಶೋಕ್ ತಿಳಿಸಿದ್ದಾರೆ.

ನರಸಿಂಹ ಅವರ ದೇಹದಲ್ಲಿ ಮಂಗನ ಕಾಯಿಲೆ ವೈರಾಣು ಇರುವುದನ್ನು ಶಿವಮೊಗ್ಗದ ಪರಿಮಾಣು ಕ್ರಿಮಿ ಸಂಶೋಧನಾ ಪ್ರಯೋಗಾಲಯ ದೃಢಪಡಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು