ಶನಿವಾರ, ಫೆಬ್ರವರಿ 29, 2020
19 °C

ದೇವೇಗೌಡರು ಜಮೀನು ಹಿಂತಿರುಗಿಸಿ ಜನರ ಕ್ಷಮೆ ಯಾಚಿಸಲಿ: ಎಸ್‌.ಆರ್‌. ಹಿರೇಮಠ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಮ್ಮ ಘನತೆಗೆ ತಕ್ಕಂತೆ ನಡೆದುಕೊಂಡು ಒತ್ತುವರಿ ಜಮೀನು ಹಿಂತಿರುಗಿಸಬೇಕು. ಜನರ ಕ್ಷಮೆ ಯಾಚಿಸಬೇಕು ಎಂದು ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಕುಮಾರಸ್ವಾಮಿ, ಡಿ.ಸಿ. ತಮ್ಮಣ್ಣ ಕುಟುಂಬದವರು ಜಮೀನು ಒತ್ತುವರಿ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಸ್ಥಳ ವೀಕ್ಷಣೆಗೆ ಹೋದ ನಮ್ಮ ಮೇಲೆ ಕುಮಾರಸ್ವಾಮಿ ಬೆಂಬಲಿತ ಗೂಂಡಾಗಳು ಹಲ್ಲೆಗೆ ಯತ್ನಿಸಿ, ಮೊಟ್ಟೆ ಎಸೆದಿದ್ದಾರೆ. ಪೊಲೀಸರು ತಮ್ಮ ಕಣ್ಣ ಮುಂದೆ ಈ ಕೃತ್ಯ ನಡೆದಿದ್ದರೂ ಕ್ರಮ ಕೈಗೊಳ್ಳಲಿಲ್ಲ. ಈ ಬಗ್ಗೆ ಎಸ್ಪಿಗೆ ದೂರು ಸಲ್ಲಿಸಿದ್ದೇವೆ ಎಂದರು.

ರಿಪಬ್ಲಿಕ್ ಆಫ್ ಕನಕಪುರ, ರಿಪಬ್ಲಿಕ್ ಆಫ್ ಬಳ್ಳಾರಿಯಂತೆ‌ ರಾಮನಗರ ಆಗಲು ಬಿಡೆವು. ತಾರ್ಕಿಕ ಅಂತ್ಯ ಕಾಣಿಸುವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು