ಶುಕ್ರವಾರ, ಡಿಸೆಂಬರ್ 6, 2019
20 °C

ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚಿಸುವುದು ದೇವೇಗೌಡರ ಹಗಲು ಕನಸು: ವಿ. ಸೋಮಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: 'ರಾಜ್ಯದಲ್ಲಿ ಪುನಃ ಮೈತ್ರಿ ಸರ್ಕಾರ ರಚಿಸುತ್ತೇವೆ ಎಂದು ಹೇಳುತ್ತಿರುವ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್. ಡಿ. ದೇವೇಗೌಡ ಅವರು ಹಗಲು ಕನಸು ಕಾಣುತ್ತಿದ್ದಾರೆ' ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.

ವಿಜಯನಗರ ಕ್ಷೇತ್ರದ ಉಪಚುನಾವಣೆ ನಿಮಿತ್ತ ಹಮ್ಮಿಕೊಂಡಿರುವ ವೀರಶೈವ ಲಿಂಗಾಯತ ಸಮಾಜದ ಸಭೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, 'ಮೈತ್ರಿ ಸರ್ಕಾರದ ಕಾರ್ಯ ವೈಖರಿಯನ್ನು ರಾಜ್ಯದ ಜನ ನೋಡಿದ್ದಾರೆ. ಹೀಗಾಗಿ ಜನ ಬಿಜೆಪಿಯನ್ನು ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲಿಸಿ ಸ್ಥಿರ ಸರ್ಕಾರ ಸ್ಥಾಪನೆ ಪರ ಮತ ಚಲಾಯಿಸುವರು' ಎಂದು ಭವಿಷ್ಯ ನುಡಿದರು.

'ಮಲ್ಲಿಕಾರ್ಜುನ ಖರ್ಗೆಯವರು ಲೋಕಸಭೆ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಐದು ವರ್ಷ ಸುಮ್ಮನಿರಬೇಕು. ಏನೇನೋ ಮಾತನಾಡುವುದರಲ್ಲಿ ಅರ್ಥವಿಲ್ಲ' ಎಂದರು.

ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ, ಶಾಸಕರಾದ ಹಾಲಪ್ಪ ಆಚಾರ್, ಶಿವರಾಜ ಪಾಟೀಲ, ವೆಂಕಾರೆಡ್ಡಿ ಮುದ್ನಾಳ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ, ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ, ಅಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾಧ್ಯಕ್ಷ ಸಾಲಿ ಸಿದ್ದಯ್ಯ ಸ್ವಾಮಿ, ವೀರಶೈವ ಲಿಂಗಾಯತ ಸಮಾಜದ ತಾಲ್ಲೂಕು ಅಧ್ಯಕ್ಷ ಶರಣಯ್ಯ ಸ್ವಾಮಿ, ಪ್ರಧಾನ ಕಾರ್ಯದರ್ಶಿ ರವಿಶಂಕರ್, ಮುಖಂಡರಾದ ನೇಮರಾಜ ನಾಯ್ಕ, ಗುತ್ತಿಗನೂರು ವಿರೂಪಾಕ್ಷಗೌಡ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು