ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನದಿಂದಲೇ ದೇವೇಗೌಡ ಸ್ಪರ್ಧೆ?

Last Updated 18 ಮಾರ್ಚ್ 2019, 20:18 IST
ಅಕ್ಷರ ಗಾತ್ರ

ಹಾಸನ: ಹಾಸನ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಕೂಟದ (ಕಾಂಗ್ರೆಸ್‌, ಜೆಡಿಎಸ್‌) ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅಬ್ಬರದ ಪ್ರಚಾರ ನಡೆಸುತ್ತಿರುವಾಗಲೇ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ತವರು ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಕ್ಷೇತ್ರದಲ್ಲಿ ಹರಿದಾಡುತ್ತಿದೆ.

ಮೈತ್ರಿ ಪಕ್ಷದಲ್ಲಿ ಮೂಡದ ಒಮ್ಮತ ಹಾಗೂ ಕೆಲವು ಕಡೆ ವಿರೋಧ ವ್ಯಕ್ತವಾಗುತ್ತಿದೆ. ಇಂತಹ ಪರಿಸ್ಥಿಯಲ್ಲಿ ತವರು ಕ್ಷೇತ್ರವನ್ನು ಮೊಮ್ಮಗನಿಗೆ ಬಿಟ್ಟುಕೊಟ್ಟಿರುವ ಗೌಡರು, ಎಲ್ಲಿಂದ ಸ್ಪರ್ಧೆ ಮಾಡುತ್ತಾರೆ ಎಂಬ ಗೊಂದಲಕ್ಕೆ ತೆರೆ ಬಿದ್ದಿಲ್ಲ. ಇದರ ಬೆನ್ನೆಲ್ಲೆ ಹಾಸನ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಜ್ಯೋತಿಷಿಯೊಬ್ಬರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಹಾಗಾಗಿ ಜಿಲ್ಲೆಯಿಂದಲೇ ಸ್ಪರ್ಧಿಸಲಿದ್ದಾರೆ ಎಂಬ ಚರ್ಚೆ ಪಕ್ಷದ ವಲಯದಲ್ಲಿ ನಡೆದಿದೆ.

‘ದೊಡ್ಡವರು ಹಾಸನಕ್ಕೆ ಬಂದರೆ ಸಂತೋಷದಿಂದ ಸ್ವಾಗತ ಮಾಡುತ್ತೇನೆ. ಅಷ್ಟೇ ಅಲ್ಲ ಇನ್ನೂ ಹೆಚ್ಚಿನ ಶ್ರಮವಹಿಸಿ 6 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಲಾಗುವುದು’ ಎಂದು ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಹೇಳಿದ್ದಾರೆ.

ಆಲೂರಿನಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ‘ದೇವೇಗೌಡರು 60 ವರ್ಷಗಳಿಂದ ಹಾಸನದಲ್ಲೇ ಸಕ್ರಿಯ ರಾಜಕೀಯ ಮಾಡಿದ್ದಾರೆ. ಹೀಗಾಗಿ ಕೊನೆ ಅವಧಿಯಲ್ಲಿ ಸ್ವಕ್ಷೇತ್ರದಿಂದಲೇ ಸ್ಪರ್ಧೆ ಮಾಡಬೇಕು ಎಂಬುದು ನಮ್ಮ ಅಭಿಲಾಷೆ. ಎಲ್ಲಿ ನಿಲ್ಲಬೇಕು ಎಂಬುದು ಶೀಘ್ರ ನಿರ್ಧಾರವಾಗಲಿದೆ’ ಎಂಬ ಹೇಳಿಕೆ ಕಾರ್ಯಕರ್ತರಲ್ಲಿ ಗೊಂದಲ ಉಂಟು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT