ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ವಿಟರ್‌ ಖಾತೆ ತೆರೆದ ದೇವೇಗೌಡ

Last Updated 30 ಆಗಸ್ಟ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರು ಟ್ವಿಟರ್‌ ಖಾತೆಯನ್ನು ತೆರೆಯುವ ಮೂಲಕ ಈಗ ಸಾಮಾಜಿಕ ಜಾಲತಾಣದಲ್ಲೂ ಸಕ್ರಿಯರಾಗಿದ್ದಾರೆ.

@H_D_Devegowda ಎಂಬ ಹೆಸರಿನ ಟ್ವಿಟರ್ ಖಾತೆ ಮೂಲಕ ಅವರು ಇನ್ನು ಮುಂದೆ ರಾಷ್ಟ್ರ ರಾಜಕಾರಣ, ಜಾಗತಿಕ ವಿದ್ಯಮಾನಗಳ ಬಗ್ಗೆ ತಮ್ಮ ಅಭಿಪ್ರಾಯ ಮತ್ತು ಪ್ರತಿಕ್ರಿಯೆಗಳನ್ನು ನೀಡಲಿದ್ದಾರೆ.

ತಮ್ಮ ಚೊಚ್ಚಲ ಟ್ವೀಟ್‌ನಲ್ಲಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ 100 ದಿನಗಳನ್ನು ಪೂರೈಸಿರುವ ಬಗ್ಗೆ ಶುಭಾಶಯ ಕೋರಿದ್ದಾರೆ. ಅಲ್ಲದೆ, ಈ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನು ಹೊಸ ಎತ್ತರಕ್ಕೆ ಒಯ್ಯಲಿ ಎಂದೂ ಅವರು ಹಾರೈಸಿದ್ದಾರೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT