'ರಾಷ್ಟ್ರೀಯ ಧರ್ಮ ಸಂಸತ್ 2018' ಉದ್ಘಾಟನೆ

7

'ರಾಷ್ಟ್ರೀಯ ಧರ್ಮ ಸಂಸತ್ 2018' ಉದ್ಘಾಟನೆ

Published:
Updated:

ಕನ್ಯಾಡಿ- ಉಜಿರೆ (ದಕ್ಷಿಣ ಕನ್ನಡ): ಇಲ್ಲಿನ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧಿಪತಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ ದಶಮಾನೋತ್ಸವ ಪ್ರಯುಕ್ತ ಆಯೋಜಿಸಿರುವ ರಾಷ್ಟ್ರೀಯ ಧರ್ಮ ಸಂಸತ್ 2018 ಹರಿದ್ವಾರದ ಜುನಾ ಅಖಾಡದ ಮಹಾಮಂಡಲೇಶ್ವರ ಮಹಾಂತ ದಯಾನಂದ ಸರಸ್ವತಿ ಸೋಮವಾರ ಉದ್ಘಾಟಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದಾರೆ. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್, ಸಂಸದ ನಳಿನ್ ಕುಮಾರ್ ಕಟೀಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದಾರೆ.

ವಿವಿಧ ಮಠಗಳ ಸ್ವಾಮೀಜಿಗಳು, ಹಲವು ಅಖಾಡಗಳ ಮಹಾಂತರು, ನಾಥ ಪಂಥದ ಸ್ವಾಮೀಜಿಗಳು, ನಾಗಾ ಸಾಧುಗಳು ಸೇರಿದಂತೆ ನೂರಕ್ಕೂ ಹೆಚ್ಚು ಸಾಧು, ಸಂತರು ವೇದಿಕೆಯಲ್ಲಿದ್ದಾರೆ.

 

ಬರಹ ಇಷ್ಟವಾಯಿತೆ?

 • 3

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !