ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮಸ್ಥಳ: ಚೆಕ್‌ ಡ್ಯಾಂ ನಿರ್ಮಿಸಲು ಹೆಗ್ಗಡೆ ಬೇಡಿಕೆ

Last Updated 20 ಮೇ 2019, 17:13 IST
ಅಕ್ಷರ ಗಾತ್ರ

ಬೆಂಗಳೂರು: ಧರ್ಮಸ್ಥಳದಲ್ಲಿ ನೀರಿನ ತೀವ್ರ ಅಭಾವ ತಲೆದೋರಿರುವ ಹಿನ್ನೆಲೆಯಲ್ಲಿ ಡಿ.ವೀರೇಂದ್ರ ಹೆಗ್ಗಡೆ ಅವರ ಬೇಡಿಕೆಯಂತೆ ನೆರಿಯಾ ಹೊಳೆಗೆ ಚೆಕ್‌ ಡ್ಯಾಂ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ನೀರಿನ ಕೊರತೆಯಿಂದ ಧರ್ಮಸ್ಥಳ ಕ್ಷೇತ್ರಕ್ಕೆ ಬರುವ ಯಾತ್ರಿಕರಿಗೆ ತೀವ್ರ ಸಮಸ್ಯೆಯಾಗಿದೆ. ಹೀಗಾಗಿ, ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಲಹೆಯಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಹೆಗ್ಗಡೆ
ಯವರ ಜೊತೆ ಸೋಮವಾರ ಚರ್ಚೆ ನಡೆಸಿದರು. ಮುಖ್ಯ ಕಾರ್ದರ್ಶಿಯವರ ಸೂಚನೆಯಂತೆ ಅಧಿಕಾರಿಗಳ ತಂಡದ ಜೊತೆ ಧರ್ಮಸ್ಥಳಕ್ಕೆ ತೆರಳಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಆರ್‌. ಸೆಲ್ವಮಣಿ ಸ್ಥಳ ಪರಿಶೀಲನೆ ನಡೆಸಿದರು.‘ನೆರಿಯಾ ಹೊಳೆಗೆ ಚೆಕ್‌ಡ್ಯಾಂ ನಿರ್ಮಿಸುವ ಕುರಿತಂತೆ ಶೀಘ್ರದಲ್ಲೇ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಸೆಲ್ವಮಣಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT