ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ ಕೃಷಿ ವಿವಿ ರಾಜ್ಯದಲ್ಲೇ ಅತ್ಯುತ್ತಮ

Last Updated 20 ಜುಲೈ 2019, 18:33 IST
ಅಕ್ಷರ ಗಾತ್ರ

ಧಾರವಾಡ: ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಪರಿಷತ್ತಿನ (ಐಸಿಎಆರ್) ಕೃಷಿ ಶಿಕ್ಷಣ ವಿಭಾಗವು ಘೋಷಿಸಿರುವ ಅತ್ಯುತ್ತಮ ಕೃಷಿ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ.

91ನೇ ಐಸಿಎಆರ್ ಸಂಸ್ಥಾಪನಾ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯ ಹಾಗು ಕೇಂದ್ರ ಕೃಷಿ ವಿಶ್ವವಿದ್ಯಾಲಯಗಳು ಮತ್ತು ಐಸಿಎಆರ್ ಡೀಮ್ಡ್‌–ಟು–ಬಿ ವಿಶ್ವವಿದ್ಯಾಲಯಗಳ ಶ್ರೇಯಾಂಕವನ್ನು ಪ್ರಕಟಿಸಲಾಯಿತು.

‘ರಾಜ್ಯದ ಆರು ಕೃಷಿ ವಿಶ್ವವಿದ್ಯಾಲಯಗಳಲ್ಲಿ ಧಾರವಾಡ ವಿಶ್ವವಿದ್ಯಾಲಯ ಮೊದಲನೇ ಸ್ಥಾನ ಪಡೆದರೆ, ರಾಷ್ಟ್ರ ಮಟ್ಟದಲ್ಲಿ 16ನೇ ಸ್ಥಾನ ಪಡೆದಿದೆ. ವಿಶ್ವವಿದ್ಯಾಲಯದಬೀಜೋತ್ಪಾದನೆ, ಮಣ್ಣಿನ ವಿಶ್ಲೇಷಣೆ, ಆದಾಯ ಉತ್ಪಾದನೆ, ಅಂತರ–ಸಾಂಸ್ಥಿಕ ಸಹಕಾರಿ ಯೋಜನೆಗಳು, ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮ, ಬೋಧನಾ ಫಲಿತಾಂಶ, ಸಂಶೋಧನೆ, ವಿಸ್ತರಣಾ ಕ್ಷೇತ್ರದಲ್ಲಿನ ಸಾಧನೆಗಳನ್ನು ಪರಿಶೀಲಿಸಲಾಗಿದೆ’ ಎಂದುಕುಲಪತಿ ಡಾ. ಎಂ.ಬಿ.ಚೆಟ್ಟಿ ತಿಳಿಸಿದ್ದಾರೆ.

‘ಈ ಸಾಧನೆಗೆ ವಿಶ್ವವಿದ್ಯಾಲಯದ ಸಮಸ್ತ ಸಿಬ್ಬಂದಿಯ ಪರಿಶ್ರಮವೇ ಕಾರಣ. ಇಲ್ಲಿ ಅಭಿವೃದ್ಧಿಪಡಿಸುತ್ತಿರುವ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು, ಸ್ಪಂದಿಸುತ್ತಿರುವ ಕೃಷಿ ಸಮುದಾಯದ ಪಾಲೂ ಈ ಯಶಸ್ಸಿನಲ್ಲಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT