ಶನಿವಾರ, ಏಪ್ರಿಲ್ 17, 2021
23 °C

ಗೊತ್ತುವಳಿ ಮೇಲಿನ ಮತದಾನ ಮುಂದೂಡುವುದಿಲ್ಲ: ದಿನೇಶ್ ಗುಂಡೂರಾವ್ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಶ್ವಾಸಮತ ಗೊತ್ತುವಳಿಯನ್ನು ಸೋಮವಾರ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಶನಿವಾರ ಹೇಳಿದ್ದಾರೆ.

ಸೋಮವಾರವೇ ವಿಶ್ವಾಸಮತ ಗೊತ್ತುವಳಿ ಮೇಲೆ ಮತದಾನ ನಡೆಯಲಿದೆ. ಮತ್ತೆ ಮುಂದೂಡುವ ಉದ್ದೇಶ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತನಾಡಿದ ಅವರು ಜೆಡಿಎಸ್‌ ವಿಶ್ವಾಸಮತ ಯಾಚನೆಗೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್‌ ಮೋರೆ ಹೋಗಿದೆ. ಒಂದು ವೇಳೆ ಅದರ ವಿಚಾರಣೆ ಮುಂದಕ್ಕೆ ಹೋದರೂ ನಾವು ಸೋಮವಾರವೇ ವಿಶ್ವಾಸ ಗೊತ್ತುವಳಿಯನ್ನು ಮತಕ್ಕೆ ಹಾಕಲಿದ್ದೇವೆ ಎಂದು ಗುಂಡೂರಾವ್‌ ತಿಳಿಸಿದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು