ಸೋಮವಾರ, ಮೇ 17, 2021
23 °C

ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಅವರನ್ನು ನೇಮಕ ಮಾಡಲಾಗಿದೆ. 

ಕೆಪಿಸಿಸಿ ಅಧ್ಯಕ್ಷರಾಗಿ ಎಂಟು ವರ್ಷ ಕೆಲಸ ಮಾಡಿದ್ದ ಹಾಲಿ‌ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರಿಗಿದ್ದ ಜವಾಬ್ದಾರಿ‌ ದಿನೇಶ್‌ ಗುಂಡೂರಾವ್ ಅವರ ಹೆಗಲಿಗೆ ಬಿದ್ದಿದೆ.

 ಎಸ್.ಆರ್. ಪಾಟೀಲ ರಾಜೀನಾಮೆಯಿಂದ ತೆರವಾಗಿದ್ದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಈಶ್ವರ ಖಂಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ.  ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಸ್ಥಾನಕ್ಕೆ ಯುವ ಮುಖ ತರಬೇಕು ಎಂಬ ಬೇಡಿಕೆಯಿತ್ತು.‌

ಸಂಸದರಾದ ಕೆ.ಎಚ್. ಮುನಿಯಪ್ಪ, ಬಿ.ಕೆ.ಹರಿಪ್ರಸಾದ್, ಶಾಸಕ ಎಚ್‌ . ಕೆ. ಪಾಟೀಲ, ಮಾಜಿ ಶಾಸಕ ಟಿ.ಬಿ.ಜಯಚಂದ್ರ ಆಕಾಂಕ್ಷಿಗಳಾಗಿದ್ದರು. ಸಚಿವ ಸ್ಥಾನದ‌ ಜತೆ ಕೆಪಿಸಿಸಿ ಅಧ್ಯಕ್ಷ ಸ್ಥಾನ‌‌ಕೊಡಿ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಬೇಡಿಕೆ ಇಟ್ಟಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು