ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್‌ ಗುಂಡೂರಾವ್‌ ರಾಜೀನಾಮೆ

Last Updated 9 ಡಿಸೆಂಬರ್ 2019, 11:20 IST
ಅಕ್ಷರ ಗಾತ್ರ

ಬೆಂಗಳೂರು: ಉಪಚುನಾವಣೆ ಫಲಿತಾಂಶದಿಂದ ನನಗೆ ನೋವಾಗಿದ್ದು, ಜನರ ತೀರ್ಪನ್ನು ಗೌರವಿಸುತ್ತೇನೆ. ಸೋಲಿನ ನೈತಿಕ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ದಿನೇಶ್‌ ಗುಂಡೂರಾವ್‌ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಂದೆ ಯಾರೇ ಪಕ್ಷದ ಅಧ್ಯಕ್ಷರಾದರೂ ನಾನು ಸಹಕಾರ ನೀಡುತ್ತೇನೆ. ಈ ದೇಶಕ್ಕೆ ಕಾಂಗ್ರೆಸ್ ಅಗತ್ಯವಿದೆ. ಕಾಂಗ್ರೆಸ್ ಕಟ್ಟುವುದು ನನ್ನ ಜವಾಬ್ದಾರಿ. ಅದಕ್ಕೆ ನನ್ನ ಸಹಕಾರ ನೀಡುತ್ತೇನೆ’ ಎಂದು ಹೇಳಿದರು.

ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಮತದಾರರು ಪಾಠ ಕಲಿಸುತ್ತಾರೆ ಎಂಬ ನಿರೀಕ್ಷೆ ಇತ್ತು. ಅದು ಹುಸಿಯಾಗಿದೆ. ಆದರೆ, ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ನಾಯಕರಾದ ಸಿದ್ದರಾಮಯ್ಯ, ಜಿ.ಪರಮೇಶ್ವರ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್‌ ಸೇರಿದಂತೆ ಎಲ್ಲ ನಾಯಕರು ಅಭ್ಯರ್ಥಿಗಳ ಪರ ಶಕ್ತಿ ಮೀರಿ ಕೆಲಸ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ...ಕಾಂಗ್ರೆಸ್‌ ಕಳಪೆ ಪ್ರದರ್ಶನ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT