ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಹಾರ ಭದ್ರತೆ ಮನವಿ ಪರಿಗಣಿಸಲು ನಿರ್ದೇಶನ

Last Updated 27 ಮಾರ್ಚ್ 2020, 4:22 IST
ಅಕ್ಷರ ಗಾತ್ರ

ಬೆಂಗಳೂರು: ‘ಲಾಕ್ ಡೌನ್ ಅವಧಿಯಲ್ಲಿ ಕೂಲಿ, ವಲಸೆ ಕಾರ್ಮಿಕರು ಹಾಗೂ ನಿರ್ಗತಿಕರಿಗೆಆಹಾರಭದ್ರತೆ ಕಲ್ಪಿಸಲು ಕೋರಿರುವ ಮನವಿಗಳನ್ನು ಪರಿಗಣಿಸಬೇಕು’ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಕರ್ನಾಟಕ ಗೃಹ ಕಾರ್ಮಿಕರ ಹಕ್ಕುಗಳ ಸಂಘಟನೆ, ಸಾವಿತ್ರಿ ಬಾ ಫುಲೆ ಮಹಿಳಾ ಸಂಘಟನೆ, ಗಾರ್ಮೆಂಟ್ಸ್ ಮತ್ತು ಟೆಕ್ಸ್ ಟೈಲ್ ಕಾರ್ಮಿಕರ ಸಂಘಟನೆ ನಡೆಸಿರುವ ಸಮೀಕ್ಷೆ ಮತ್ತು ಇದರ ಆಧಾರದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದ ವರದಿ ಪರಿಗಣಿಸುವಂತೆ ಕೋರಲಾಗಿತ್ತು.

ಆಹಾರಭದ್ರತೆ ಕುರಿತಂತೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೂ ಮನವಿ ಮಾಡಲಾಗಿತ್ತು. ಈ ಬಗ್ಗೆ ಪಿಯುಸಿಎಲ್ (ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್) ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿತ್ತು.

ಈ ಪತ್ರವನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ಈ ಕುರಿತಂತೆ ನಿರ್ದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT