ಶುಕ್ರವಾರ, ಆಗಸ್ಟ್ 7, 2020
22 °C
ಪೊಳಲಿಯಲ್ಲಿ ಪೂಜೆ

‘ಶೈಕ್ಷಣಿಕ ನಿರ್ಧಾರ: ಮಾಜಿ ಶಿಕ್ಷಣ ಸಚಿವರ ಜೊತೆಗೂ ಚರ್ಚೆ’: ಎಸ್. ಸುರೇಶ್ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಮಂಗಳೂರು: ಕೋವಿಡ್ ಭೀತಿ ಇರುವ ಹಿನ್ನೆಲೆಯಲ್ಲಿ ಶಾಲೆಗಳ ಆರಂಭ ಸೇರಿದಂತೆ ವಾಸ್ತವ ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಧಾರ ಕೈಗೊಳ್ಳಬೇಕು. ಹೀಗಾಗಿ, ಈ ಹಿಂದಿನ ಏಳು ಜನ ಶಿಕ್ಷಣ ಸಚಿವರ ಜತೆ ಮುಂದಿನ ಶುಕ್ರವಾರ ಸಭೆ ನಡೆಸಿ ಚರ್ಚಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‌ಕುಮಾರ್ಹೇಳಿದರು.

ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಿರಾತಂಕವಾಗಿ ಪೂರ್ಣಗೊಂಡಿದ್ದರಿಂದ ಬಂಟ್ವಾಳ ತಾಲ್ಲೂಕಿನ ಪೊಳಲಿ ರಾಜರಾಜೇಶ್ವರಿ ಕ್ಷೇತ್ರಕ್ಕೆ ಶುಕ್ರವಾರ ಪತ್ನಿ ಸಮೇತ ಭೇಟಿ ನೀಡಿದ್ದ ಅವರು, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಶಾಲೆಗಳ ಆರಂಭ ಸದ್ಯಕ್ಕೆ ಕಷ್ಟಸಾಧ್ಯ. ಆನ್‌ಲೈನ್ ಶಿಕ್ಷಣಕ್ಕೂ ಕೆಲವೆಡೆ ನೆಟ್‌ವರ್ಕ್ ಸಮಸ್ಯೆ ಇದೆ. ಜುಲೈ ಅಂತ್ಯದವರೆಗೆ ಶಾಲೆಗಳನ್ನು ಆರಂಭ ಮಾಡಬಾರದು ಎಂದು ಕೇಂದ್ರ ಸರ್ಕಾರ ಹೇಳಿದೆ. ಹೀಗಾಗಿ ತಜ್ಞರು ಮತ್ತು ಪೋಷಕರ ಜತೆ ಚರ್ಚಿಸಲಾಗುವುದು’ ಎಂದರು.

ಕಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ ಕೌಶಿಕ್‌ನನ್ನು ಭೇಟಿ ಮಾಡಿದ ಅವರು, ಆತನನ್ನು ಅಭಿನಂದಿಸಿದರು. ಮಾರ್ಗಮಧ್ಯೆ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿ, ಡಾ.ಪ್ರಭಾಕರ ಭಟ್‌ ಕಲ್ಲಡ್ಕ ಅವರೊಂದಿಗೆ ಚರ್ಚಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು