ಗುರುವಾರ , ಸೆಪ್ಟೆಂಬರ್ 23, 2021
27 °C

ಅನರ್ಹರು ಬಿಜೆಪಿ ಸೇರುವ ಬಗ್ಗೆ ಸ್ಪಷ್ಟತೆ ಇಲ್ಲ: ಅರವಿಂದ ಲಿಂಬಾವಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಎಲ್ಲರೂ ಬಿಜೆಪಿ ಸೇರುತ್ತಾರೆ ಎಂಬ ಸ್ಪಷ್ಟತೆ ಇಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ತಿಳಿಸಿದರು.

‘17 ಶಾಸಕರ ರಾಜೀನಾಮೆಯಿಂದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಕೆಲವರು ಬಿಜೆಪಿಗೆ ಬರುವ ಬಗ್ಗೆ ಮಾಹಿತಿ ಇದೆ.  ಆದರೆ, ಎಲ್ಲರೂ ಪಕ್ಷಕ್ಕೆ ಸೇರುತ್ತಾರೆ ಎಂಬ ಕುರಿತು ಸ್ಪಷ್ಟತೆ ಇಲ್ಲ. ವದಂತಿಗಳ ಮೇರೆಗೆ ಕೆಲವು ಕ್ಷೇತ್ರಗಳಲ್ಲಿ ಅಸಮಾಧಾನ ಹುಟ್ಟಿಕೊಂಡಿದೆ. ಪಕ್ಷ ಕಟ್ಟಿ ಬೆಳೆಸಿದವರು ಆತಂಕಗೊಳ್ಳುವುದು ಸಹಜ ಕೂಡ’ ಎಂದು ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿಜೆಪಿ ಅಧ್ಯಕ್ಷ ನಳೀನ್‌ ಕುಮಾರ್‌ ಕಟೀಲು ನಡುವೆ ವೈಮನಸು ಉಂಟಾಗಿದೆ ಎಂಬುದು ಮಾಧ್ಯಮ ಸೃಷ್ಟಿ. ಮುಖ್ಯಮಂತ್ರಿ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳುತ್ತಿಲ್ಲ. ಪಕ್ಷದ ಕೋರ್‌ ಕಮಿಟಿಯಲ್ಲಿ ಕೈಗೊಂಡ ತೀರ್ಮಾನಗಳ ಆಧಾರದ ಮೇರೆಗೆ ಸರ್ಕಾರ ಹೆಜ್ಜೆ ಇಡುತ್ತಿದೆ. ಅಗತ್ಯವಿದ್ದರೆ ಅವರಿಬ್ಬರನ್ನೂ ನೇರವಾಗಿ ಪ್ರಶ್ನಿಸಬಹುದು’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು