ಮಂಗಳವಾರ, ನವೆಂಬರ್ 19, 2019
22 °C

ಅನರ್ಹ ಶಾಸಕರ ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌

Published:
Updated:

ನವದೆಹಲಿ: ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವ ಸ್ಪೀಕರ್‌ ಆದೇಶದ ಸಿಂಧುತ್ವ ಪ್ರಶ್ನಿಸಿ 17 ಜನ ಅನರ್ಹರು ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೋಮವಾರಕ್ಕೆ ಮುಂದೂಡಿದೆ.

ನ್ಯಾಯಮೂರ್ತಿ ಎನ್‌.ವಿ. ರಮಣ ನೇತೃತ್ವದ ಪೀಠವು ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.

ಪ್ರಕರಣದ ತುರ್ತು ವಿಚಾರಣೆಗೆ ಕೋರಿ ಅನರ್ಹರ ಪರ ವಕೀಲರು ಈ ಹಿಂದೆ ಮೂರು ಬಾರಿ ಮಾಡಿಕೊಂಡ ಮನವಿಯನ್ನು ತಿರಸ್ಕರಿಸಿದ್ದ ಪೀಠ, ರಿಜಿಸ್ಟ್ರಾರ್ ಕಚೇರಿ ಮೂಲಕವೇ ಪ್ರಕರಣವು ವಿಚಾರಣೆಗಾಗಿ ಪಟ್ಟಿಯಾಗಲಿ ಎಂದು ಹೇಳಿತ್ತು.

ಪ್ರತಿಕ್ರಿಯಿಸಿ (+)