ಗುರುವಾರ , ಆಗಸ್ಟ್ 22, 2019
22 °C

ಅನರ್ಹತೆ: ‘ಸುಪ್ರೀಂ’ ವಿಚಾರಣೆ ಶುಕ್ರವಾರ

Published:
Updated:

ನವದೆಹಲಿ: ಪಕ್ಷಾಂತರ ನಿಷೇಧ ಕಾಯ್ದೆ ಅಡಿ ರಾಜ್ಯದ 17 ಜನರ ವಿಧಾನಸಭೆ ಸದಸ್ಯತ್ವವನ್ನು ಅನರ್ಹಗೊಳಿಸಿರುವ ಸ್ಪೀಕರ್‌ ಆದೇಶದ ಸಿಂಧುತ್ವ ಪ್ರಶ್ನಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಇದೇ 9ರಂದು ಶುಕ್ರವಾರ ಕೈಗೆತ್ತಿಕೊಳ್ಳಲಿದೆ.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕ ಸ್ಥಾನದಿಂದ ಅನರ್ಹತೆಗೆ ಒಳಗಾಗಿರುವವರ ಮೇಲ್ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಪೀಠ ನಡೆಸಲಿದೆ.15 ಜನ ಕಳೆದ ಗುರುವಾರ ಹಾಗೂ ಇಬ್ಬರು ಜುಲೈ 29ರಂದು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

Post Comments (+)