ಕಲಬುರ್ಗಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸ್ವಾತಂತ್ರ್ಯವಿಲ್ಲ. ಸಂಪುಟ ವಿಸ್ತರಣೆಯಲ್ಲೂ ಅವರನ್ನು ಇನ್ಯಾರೋ ಆಟವಾಡಿಸುತ್ತಿದ್ದಾರೆ. ಈಗಿನ ಸಚಿವ ಸಂಪುಟ ಅಸಮತೋಲನದಿಂದ ಕೂಡಿದೆ. ಇದು ಸರ್ಕಾರದಲ್ಲಿ ಅಸಮಾಧಾನಕ್ಕೆ ಕಾರಣವಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಕಲಬುರ್ಗಿಯಲ್ಲಿ ಶುಕ್ರವಾರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದ ಅವರು, ಶನಿವಾರ ಮುಂಜಾನೆ ಮಾಧ್ಯಮದವರೊಂದಿಗೆ ಮಾತನಾಡಿದರು.

ಯಡಿಯೂರಪ್ಪ ಅಸಮರ್ಥ ಮುಖ್ಯಮಂತ್ರಿ. ರಾಜ್ಯದ 13 ಜಿಲ್ಲೆಗಳಿಗೆ ಸಚಿವ ಸ್ಥಾನದ ಪ್ರಾತಿನಿಧ್ಯವೇ ಸಿಕ್ಕಿಲ್ಲ. ಸಾಮಾಜಿಕ ನ್ಯಾಯವೂ ಇಲ್ಲ ಎಂದು ಟೀಕಿಸಿದರು.

ದೆಹಲಿ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ನೇಮಕ ವಿಳಂಬವಾಗಿದೆ. ಅಧ್ಯಕ್ಷರ ನೇಮಕದಲ್ಲಿ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನನ್ನ ಅಭಿಪ್ರಾಯವನ್ನು ಹೈಕಮಾಂಡ್‌ಗೆ ತಿಳಿಸಿದ್ದೇನೆ. ನೇಮಕದ ದಿನಾಂಕವನ್ನು ನಾವು ನಿಗದಿ ಮಾಡುವುದಕ್ಕೆ ಆಗುವುದಿಲ್ಲ. ಅದು ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.