ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಸ್ಥಾನಕ್ಕೆ ಪಕ್ಷದಲ್ಲಿ ಅಸಮಾಧಾನ: ಸಚಿವ ಈಶ್ವರಪ್ಪ

Last Updated 7 ಜೂನ್ 2020, 12:48 IST
ಅಕ್ಷರ ಗಾತ್ರ

ಶಿವಮೊಗ್ಗ: ‘ಸಚಿವ ಸ್ಥಾನಕ್ಕಾಗಿ ಪಕ್ಷದಲ್ಲಿ ಅಸಮಾಧಾನವಿದೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಬಿಜೆಪಿ ಒಂದು ಕುಟುಂಬದ ವ್ಯವಸ್ಥೆಯಿದ್ದಂತೆ. ಕುಟುಂಬದರು ತಮ್ಮ ಭಾವನೆ ಹೇಳಿಕೊಳ್ಳುತ್ತಿದ್ದಾರೆ. ಬಿಜೆಪಿಗೆ ಅಸಮಾಧಾನಿತರನ್ನೂ ಕರೆದು ಮಾತನಾಡುವ ಶಕ್ತಿ ಇದೆ. ಅವರನ್ನು ಕರೆದು ಮಾತನಾಡಲಿದ್ದೇವೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋರ್ ಕಮಿಟಿಯಲ್ಲಿ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಯಾರಿಗೆ ಸ್ಥಾನ ನೀಡಿದರೆ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬುವವರ ಪಟ್ಟಿ ಮಾಡಲಾಗಿದೆ. ಆ ಪಟ್ಟಿಯನ್ನುಕೇಂದ್ರಕ್ಕೂ ಕಳುಹಿಸಲಾಗಿದೆ. ಕೇಂದ್ರದ ನಾಯಕರು ಏನು ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡುತ್ತಿದ್ದೇವೆ’ ಎಂದರು.

ಈ ಅಸಮಾಧಾನವನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಲಾಭ ಪಡೆಯಬಹುದಲ್ಲವೇ ಎಂಬ ಪ್ರಶ್ನೆಗೆ, ‘ಕಾಂಗ್ರೆಸ್ ಅವರ ಸದಸ್ಯರನ್ನೇ ಬಿಟ್ಟು ಅಧಿಕಾರ ಕಳೆದುಕೊಂಡರು. ಇನ್ನೂ ಜೆಡಿಎಸ್ ಮೇಲೆಳುವುದೇ ಕಷ್ಟವಾಗಿದೆ. ಇನ್ನೂ ಅವರು ಲಾಭ ಪಡೆದುಕೊಳ್ಳುತ್ತಾರೆ ಎಂದರೆ ಹಾಸ್ಯಾಸ್ಪದ. ಬಿಜೆಪಿಯ ಸಮಸ್ಯೆಯನ್ನು ಪಕ್ಷದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಕುಳಿತು ಬಗೆಹರಿಸುವ ವಿಶ್ವಾಸವಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT