ಭಾನುವಾರ, ಮೇ 9, 2021
24 °C

ಕೆಎಸ್‌ಒಯುಗಷ್ಟೇ ಅವಕಾಶ; ಉಳಿದ ವಿ.ವಿಗಳಿಗಿಲ್ಲ ದೂರ ಶಿಕ್ಷಣ ಕೋರ್ಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

KSOU

ಬೆಂಗಳೂರು: ಮೈಸೂರಿನಲ್ಲಿ ಇರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು) ಮಾತ್ರ ಇನ್ನು ಮುಂದೆ ದೂರ ಶಿಕ್ಷಣ ನೀಡಬೇಕು. ಉಳಿದ ಯಾವ ವಿ.ವಿ.ಗಳೂ ದೂರ ಶಿಕ್ಷಣ ನೀಡುವಂತಿಲ್ಲ.

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ (ಕೆಎಸ್‌ಎಚ್‌ಇಸಿ) ಸಾಮಾನ್ಯ ಸಭೆಯಲ್ಲಿ ಮಂಗಳವಾರ ಈ ನಿರ್ಧಾರ ಕೈಗೊಳ್ಳಲಾಯಿತು.

ವಿವಿಧ ವಿಶ್ವವಿದ್ಯಾಲಯಗಳು ದೂರ ಶಿಕ್ಷಣ ಕೋರ್ಸ್‌ಗಳನ್ನು ನಡೆಸುತ್ತಿರುವ ಬಗ್ಗೆ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಲಾಯಿತು. ಹಲವು ವಿ.ವಿ.ಗಳು ದೂರ ಶಿಕ್ಷಣ ನೀಡುತ್ತಿರುವುದಕ್ಕೆ ಕೆಎಸ್‌ಒಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇತ್ತೀಚಿನ ದಿನಗಳಲ್ಲಿ ಕೆಎಸ್‌ಒಯುಗೆ ದಾಖಲಾಗುವ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ಆರ್ಥಿಕವಾಗಿಯೂ ನಷ್ಟ ಉಂಟಾಗುತ್ತಿದೆ ಎಂದು ದೂರಿದರು.

ಕೆಎಸ್‌ಒಯು ಹೊರತುಪಡಿಸಿ ಮೈಸೂರು, ಬೆಂಗಳೂರು, ಕುವೆಂಪು, ಮಂಗಳೂರು, ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯಗಳು ಪ್ರಸ್ತುತ ದೂರ ಶಿಕ್ಷಣ ನೀಡುತ್ತಿವೆ. ಈ ವಿ.ವಿ.ಗಳು ಮುಂದಿನ 3ರಿಂದ 5 ವರ್ಷಗಳವರೆಗೆ ದೂರ ಶಿಕ್ಷಣ ನೀಡಲು ಯುಜಿಸಿಯಿಂದ ಅನುಮತಿ ಪಡೆದುಕೊಂಡಿವೆ. ಈ ಸಮಸ್ಯೆ ಪರಿಹರಿಸುವ ಬಗ್ಗೆ ಪರಿಶೀಲಿಸಬೇಕಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು