ಗುರುವಾರ , ಜನವರಿ 23, 2020
23 °C
ಕಾವೇರಿ ಕೂಗಿಗೆ ರಾಜ್ಯ ಸರ್ಕಾರ ಬೆಂಬಲ

73 ಲಕ್ಷ ಸಸಿಗಳ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾವೇರಿ ನದಿಯ ಪುನಶ್ಚೇತನಕ್ಕಾಗಿ ಇಶಾ ಫೌಂಡೇಷನ್‌ನ ಸಂಸ್ಥಾಪಕ ಜಗ್ಗಿ ವಾಸುದೇವ್ (ಸದ್ಗುರು) ನೇತೃತ್ವದಲ್ಲಿ ಆರಂಭವಾಗಿರುವ ‘ಕಾವೇರಿ ಕೂಗು’ ಅಭಿಯಾನಕ್ಕೆ ರಾಜ್ಯ ಸರ್ಕಾರ ಬೆಂಬಲ ನೀಡಿದ್ದು, ಮೊದಲ ಹಂತದಲ್ಲಿ 73 ಲಕ್ಷ ಸಸಿಗಳನ್ನು ರೈತರಿಗೆ ವಿತರಿಸಲಾಗುತ್ತದೆ. 

ಈ ಅಭಿಯಾನಕ್ಕೆ ಕೃಷಿ ತಜ್ಞರು, ಮಣ್ಣಿನ ವಿಜ್ಞಾನಿಗಳು, ಜಲವಿಜ್ಞಾನಿಗಳು ಹಾಗೂ ಸಾರ್ವಜನಿಕರು ಬೆಂಬಲ ಸೂಚಿಸಿದ್ದಾರೆ. ರಾಜ್ಯ ಸರ್ಕಾರವು ರೈತರಿಗೆ 3 ಕೋಟಿ ಸಸಿಗಳನ್ನು ವಿತರಿಸುವುದಾಗಿ ಭರವಸೆ ನೀಡಿದೆ. ಕಳೆದ ಜುಲೈನಲ್ಲಿ ಯೋಜನೆ ಪ್ರಾರಂಭವಾಗಿದ್ದು, ರಾಜ್ಯದ ಎಲ್ಲೆಡೆ ಉತ್ತಮ ಸ್ಪಂದನೆ ದೊರೆತಿದೆ.

ಕಾವೇರಿ ಜಲಾನಯನ ಪ್ರದೇಶದ ಮೂರನೇ ಒಂದು ಭಾಗದಲ್ಲಿ 242 ಕೋಟಿ ಗಿಡಗಳನ್ನು ಬೆಳೆಸುವ ಗುರಿಯನ್ನು ಹಾಕಿಕೊಂಡಿರುವುದಾಗಿ ಫೌಂಡೇಷನ್‌ ತಿಳಿಸಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು