ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮತ್ತು ಆಹಾರ ಸಚಿವ ಕೆ.ಗೋಪಾಲಯ್ಯ ಅವರನ್ನು ಹಾಸನ ಜಿಲ್ಲೆ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ.

ಈ ಹಿಂದೆ ಬೆಳಗಾವಿ ಜಿಲ್ಲೆ ಉಸ್ತುವಾರಿಯನ್ನು ಜಗದೀಶ ಶೆಟ್ಟರ್ ಮತ್ತು ಹಾಸನ ಜಿಲ್ಲಾ ಉಸ್ತುವಾರಿಯನ್ನು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ನೀಡಲಾಗಿತ್ತು.

ರಾಜಕೀಯವಾಗಿ ಪ್ರಭಾವಿ ಜಿಲ್ಲೆ ಎನಿಸಿರುವ ಬೆಳಗಾವಿ ಜಿಲ್ಲೆಗೆ ಜಗದೀಶ ಶೆಟ್ಟರ್ ಅವರನ್ನು ನೇಮಕ ಮಾಡಿದಾಗ ರಮೇಶ ಜಾರಕಿಹೊಳಿಗೆ ಹಿನ್ನಡೆ ಎಂದೇ ವ್ಯಾಖ್ಯಾನಿಸಲಾಗಿತ್ತು. ಬಿಜೆಪಿ ಸೇರುವುದಕ್ಕೆ ಮೊದಲೇ ಜಲಸಂಪನ್ಮೂಲ ಖಾತೆ ಮತ್ತು ಜಿಲ್ಲಾ ಉಸ್ತುವಾರಿಗೆ ಬೇಡಿಕೆ ಇಟ್ಟಿದ್ದರು. ಇದೀಗ ಅವರು ಬಯಸಿದಂತೆ ಜಿಲ್ಲಾ ಉಸ್ತುವಾರಿಯೂ ಸಿಕ್ಕಿದೆ.

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಮೇಲೆ ಕಣ್ಣಿತ್ತು. ಸಚಿವೆ ಶಶಿಕಲಾ ಜೊಲ್ಲೆ ಅವರೂ ಇದೇ ಜಿಲ್ಲೆಗೆ ಸೇರಿದವರು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಾರಕಿಹೊಳಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.