ಗುರುವಾರ , ಸೆಪ್ಟೆಂಬರ್ 19, 2019
22 °C

ಡಿ.ಕೆ.ಶಿವಕುಮಾರ್ ಬಂಧನ ರಾಜಕೀಯ ಪ್ರೇರಿತ : ರಾಮಲಿಂಗಾರೆಡ್ಡಿ

Published:
Updated:

ನವದೆಹಲಿ : ಡಿ.ಕೆ.ಶಿವಕುಮಾರ್ ಬಂಧಿಸಿದ್ದು ರಾಜಕೀಯ ಪ್ರೇರಿತ ಎಂದು ರಾಮಲಿಂಗಾರೆಡ್ಡಿಯವರು ಹೇಳಿದ್ದಾರೆ.

ದೆಹಲಿಯ ರಾಮ ಮನೋಹರ ಲೋಹಿಯಾ ಆಸ್ಪತ್ರೆ ಭೇಟಿ ನೀಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಸರ್ಕಾರದ ಆಸ್ತಿಪಾಸ್ತಿ ನಷ್ಟ ಮಾಡುವುದು ಸರಿಯಲ್ಲ  ಪಕ್ಷದ ಮುಖಂಡರೂ ಮತ್ತು ಕಾರ್ಯಕರ್ತರಲ್ಲಿ ಶಾಂತಿಯುತ ರೀತಿಯಲ್ಲಿ ಪ್ರತಿಭಟಿಸುವಂತೆ ಕೇಳಿಕೊಂಡಿದ್ದಾರೆ.

ಡಿ.ಕೆ.ಶಿವಕುಮಾರ್ ಅವರನ್ನು ಉದ್ದೇಶಪೂರ್ವಕವಾಗಿ ಬಂಧಿಸಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದ ಅವರು ನಾವು ಮೊದಲಿನಿಂದಲೂ ಹೇಳ್ತಿದ್ದೀವಿ. ಈಗಲೂ ಅದೇ ನಿಲುವನ್ನು ಪುನರುಚ್ಚರಿಸುತ್ತಿರುವುದಾಗಿ ತಿಳಿಸಿದರು.

Post Comments (+)