ಮಂಗಳವಾರ, ನವೆಂಬರ್ 19, 2019
29 °C

ಡಿಕೆಶಿ ಮೇಲ್ಮನವಿ ವಿಚಾರಣೆ ಸೆ. 11ಕ್ಕೆ

Published:
Updated:

ಬೆಂಗಳೂರು: ನವದೆಹಲಿಯ ಮನೆಯಲ್ಲಿ ದೊರೆತ ₹ 8.60 ಕೋಟಿ ಲೆಕ್ಕವಿಲ್ಲದ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿರುವ ಸಮನ್ಸ್‌ ರದ್ದುಗೊಳಿಸಬೇಕು ಎಂದು ಕೋರಲಾಗಿದ್ದ ಅರ್ಜಿ ವಜಾ ಮಾಡಿರುವ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಶಾಸಕ ಡಿ.ಕೆ.ಶಿವಕುಮಾರ್‌ ಮೇಲ್ಮನವಿ ಸಲ್ಲಿಸಿದ್ದಾರೆ.

ಈ ಮೇಲ್ಮನವಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಡಿ.ಕೆ.ಶಿವಕುಮಾರ್ ಪರ ವಕೀಲರು ಸೋಮವಾರ ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಮನವಿಮಾಡಿದರು. ನ್ಯಾಯಪೀಠ ವಿಚಾರಣೆಯನ್ನು ಇದೇ 11ಕ್ಕೆ ನಿಗದಿಗೊಳಿಸಿದೆ.

ಪ್ರತಿಕ್ರಿಯಿಸಿ (+)