ಭಾನುವಾರ, ಸೆಪ್ಟೆಂಬರ್ 22, 2019
25 °C

ಡಿಕೆಶಿ ಬಂಧನದ ಹಿಂದೆ ಸಿದ್ದರಾಮಯ್ಯ ಕೈವಾಡ: ನಳಿನ್‌ ಕುಮಾರ್ ಕಟೀಲ್ ಆರೋಪ

Published:
Updated:

ಬಾಗಲಕೋಟೆ: ಶಾಸಕ ಡಿ.ಕೆ. ಶಿವಕುಮಾರ್ ಬಂಧನದ ಹಿಂದೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ  ಸಿದ್ದರಾಮಯ್ಯ ಕೈವಾಡವಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.

ನಮಗೆ ಸಿದ್ದರಾಮಯ್ಯ ಮೇಲೆ ಸಂಶಯ ಇದೆ. ಡಿ.ಕೆ.ಶಿವಕುಮಾರ್ ರಾಜಕೀಯವಾಗಿ ಬೆಳೆಯುತ್ತಾರೆ ಎಂಬ ಕಾರಣಕ್ಕೆ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್‌ ಬಂಧನ ಪ್ರಕರಣ: ‘ಒಕ್ಕಲಿಗರ ಭಾವನೆ ಬಡಿದೆಬ್ಬಿಸುವ ಯತ್ನ’

ಡಿ.ಕೆ.ಶಿವಕುಮಾರ್ ಮೇಲೆ ಪ್ರಕರಣ ದಾಖಲಿಸಲು ಸಿದ್ದರಾಮಯ್ಯ ಅವರೇ ಕಾರಣ. 2017ರಲ್ಲಿ ಶಿವಕುಮಾರ್ ಮನೆ, ಕಚೇರಿಗಳ ಮೇಲೆ ಆದಾಯ ತೆರಿಗೆ (ಐಟಿ) ದಾಳಿ ಆದಾಗ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿ ಇತ್ತು. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದರು. ಅವರು ಮನಸ್ಸು ಮಾಡಿದ್ದರೆ ಆಗ ಐಟಿ ದಾಳಿ ತಡೆಯಬಹುದಿತ್ತು ಎಂದು ನಳಿನ್ ಹೇಳಿದರು.  

ಶಿವಕುಮಾರ್ ಬಂಧನದ ಹಿಂದೆ ಬಿಜೆಪಿಗೆ ಯಾವುದೇ ರಾಜಕೀಯ ದ್ವೇಷವಿಲ್ಲ. ಆ ಉದ್ದೇಶವಿದ್ದರೆ ಲೋಕಸಭಾ ಚುನಾವಣೆ ಮುಂಚೆಯೇ ಮಾಡಬಹುದಿತ್ತು. ಐಟಿ ಹಾಗೂ ಇ.ಡಿ. (ಜಾರಿ ನಿರ್ದೇಶನಾಲಯ) ಸ್ವತಂತ್ರ ಸಂಸ್ಥೆಗಳು, ಬಿಜೆಪಿ ನಿರ್ಮಿತ ಸಂಸ್ಥೆಗಳು ಅಲ್ಲ. ಅವುಗಳಿಗೆ ಪೂರ್ಣ ಸ್ವಾತಂತ್ರ್ಯ ಇದೆ ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಭಯೋತ್ಪಾದನೆಗೆ ಕಡಿವಾಣ ಹಾಕಿದ ಬಿಜೆಪಿ: ನಳಿನ್‌ ಕುಮಾರ್‌ ಕಟೀಲ್‌

ಕಾಂಗ್ರೆಸ್‌ನವರಿಗೆ ಈಗ ಮುಖ ಉಳಿಸಿಕೊಳ್ಳಬೇಕಾಗಿದೆ. ಹಾಗಾಗಿ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ನಳಿನ್ ಟೀಕಿಸಿದರು.

Post Comments (+)