ಬುಧವಾರ, ಜುಲೈ 28, 2021
21 °C

ರಾಜ್ಯಸಭೆ ಚುನಾವಣೆ: ಜೆಡಿಎಸ್‌ಗೆ ಹೆಚ್ಚುವರಿ ಮತ; ಹೈಕಮಾಂಡ್‌ ನಿರ್ಧಾರ: ಡಿಕೆಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ಹೆಚ್ಚುವರಿ ಮತಗಳನ್ನು ಜೆಡಿಎಸ್‌ ಅಭ್ಯರ್ಥಿಗೆ ನೀಡುವ ವಿಷಯದಲ್ಲಿ ಹೈಕಮಾಂಡ್‌ ನಿರ್ಧಾರ ಅಂತಿಮ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

‘ನಮ್ಮದು ಜಾತ್ಯತೀತ ಪಕ್ಷ. ಹೀಗಾಗಿ, ಬಿಜೆಪಿ ಜೊತೆಗೆ ಹೊಂದಾಣಿಕೆ ಅಸಾಧ್ಯ. ಜೆಡಿಎಸ್‌ಗೆ ಬೆಂಬಲ ನೀಡುವ ಕುರಿತಾಗಿ ಹೈಕಮಾಂಡ್‌ ನಿರ್ಧರಿಸಲಿದೆ’ ಎಂದರು.

ರಾಜ್ಯಸಭೆ ಚುವಾಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಘೋಷಣೆಯಾಗಿದೆ. ಕಾಂಗ್ರೆಸ್‌ನಲ್ಲಿರುವ ಹೆಚ್ಚುವರಿ ಮತಗಳನ್ನು ಜೆಡಿಎಸ್‌ ಅಭ್ಯರ್ಥಿಗೆ ನೀಡಬೇಕು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಆದರೆ, ಈ ಕುರಿತು ಪಕ್ಷ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ತಿಳಿಸಿದರು.

ಖರ್ಗೆ ನಾಮಪತ್ರ ಸಲ್ಲಿಗೆ ವೇಳೆ ಬರಬೇಡಿ: ‘ರಾಜ್ಯಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಬರಬಾರದು’ ಎಂದು ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.

‘ಕೊರೊನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದರೆ ಸಮಸ್ಯೆ ಉಂಟಾಗಲಿದೆ. ಹೀಗಾಗಿ, ನಾಮಪತ್ರ ಸಲ್ಲಿಕೆ ವೇಳೆ ಶಾಸಕರಿಗೆ ಮಾತ್ರ ಅವಕಾಶ ನೀಡಲಾಗುವುದು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು