ಶನಿವಾರ, ಅಕ್ಟೋಬರ್ 19, 2019
28 °C

ಡಿ.ಕೆ.ಶಿವಕುಮಾರ್ ಅರ್ಜಿ ಕಾಯ್ದಿರಿಸಿದ ಆದೇಶ

Published:
Updated:

ಬೆಂಗಳೂರು: ‘ನವದೆಹಲಿಯ ಮನೆಗಳಲ್ಲಿ ದೊರೆತ ₹ 8.60 ಕೋಟಿಯಷ್ಟು ಲೆಕ್ಕವಿಲ್ಲದ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿದ್ದ ಸಮನ್ಸ್‌ ರದ್ದುಗೊಳಿಸಬೇಕು’ ಎಂದು ಕೋರಿ ಶಾಸಕ ಡಿ.ಕೆ.ಶಿವಕುಮಾರ್‌ ಸಲ್ಲಿಸಿರುವ ಅರ್ಜಿಯ ಮೇಲಿನ ಆದೇಶವನ್ನು ಹೈಕೋರ್ಟ್‌ ಕಾಯ್ದಿರಿಸಿದೆ.

ಈ ಕುರಿತಂತೆ ಡಿ.ಕೆ.ಶಿವಕುಮಾರ್, ಅವರ ಆಪ್ತರಾದ ಆಂಜನೇಯ ಹನುಮಂತಯ್ಯ ಹಾಗೂ ಎನ್. ರಾಜೇಂದ್ರ ಸಲ್ಲಿಸಿದ್ದ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿಗಳ ಮೇಲಿನ ವಿಚಾರಣೆಯನ್ನು ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ‍ಪೂರ್ಣಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ಈಗಾಗಲೇ ಮಧ್ಯಂತರ ತಡೆ ನೀಡಿದೆ.

Post Comments (+)