ಶನಿವಾರ, ಜೂಲೈ 4, 2020
27 °C

ಅಸಂಘಟಿತ ಕಾರ್ಮಿಕರಿಗೆ ನಯಾ ಪೈಸೆ ಸಿಕ್ಕಿಲ್ಲ: ಡಿಕೆಶಿ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ ಕೆಲವು ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಘೋಷಿಸಿದ ಪ್ಯಾಕೇಜ್ ಕೇವಲ ಘೋಷಣೆಯಾಗಿಯೇ ಇದೆ. ಯಾರೊಬ್ಬರಿಗೂ ನಯಾ ಪೈಸೆ ಸಿಕ್ಕಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ‌.ಶಿವಕುಮಾರ್ ಆರೋಪಿಸಿದರು.

'ಅನಗತ್ಯ ಷರತ್ತುಗಳನ್ನು ವಿಧಿಸಿ ಬಡ ಟ್ಯಾಕ್ಸಿ, ಆಟೊ ಚಾಲಕರಿಗೆ ವಂಚಿಸಲಾಗುತ್ತಿದೆ. ಮಧ್ಯವರ್ತಿಗಳಿಗೆ ಕಮಿಷನ್ ಪಡೆಯುವುದಕ್ಕೆ ಅವಕಾಶ ನೀಡಲಾಗಿದೆ. ಇದರ ಹೊರತಾಗಿ ಚಾಲಕರನ್ನು ಗುರುತಿಸಿ ಪರಿಹಾರ ನೀಡುವುದು ಅಧಿಕಾರಿಗಳಿಗೆ ಕಷ್ಟ ಏನಿದೆ' ಎಂದು ಅವರು ಮಂಗಳವಾರ ಇಲ್ಲಿ ಮಾಧ್ಯಮದರಿಗೆ ತಿಳಿಸಿದರು.

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಸೋಮವಾರ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಪಕ್ಷ ಪರೀಕ್ಷೆಗಾದರೂ ಒಳಪಟ್ಟು ಬೆಂಗಳೂರು ನಗರಕ್ಕೆ ಬರಬೇಕಿತ್ತು ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು