ಶನಿವಾರ, ಜುಲೈ 31, 2021
27 °C

ಪರಿಷತ್‌ ಚುನಾವಣೆ | ಅನುಭವಿಗಳೇ ಬೇಕು ಎಂಬ ಕಾರಣಕ್ಕೆ ಈ ಆಯ್ಕೆ: ಡಿಕೆಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನ ಪರಿಷತ್ ಎಂದರೆ ಅದು ಹಿರಿಯರ ಮನೆ. ಅಲ್ಲಿಗೆ ಅನುಭವಿಗಳೇ ಬೇಕು ಎಂಬ ಕಾರಣಕ್ಕೆ ಬಿ.ಕೆ.ಹರಿಪ್ರಸಾದ್ ಮತ್ತು ಹಾಲಿ ಸದಸ್ಯ ನಸೀರ್ ಅಹಮದ್ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಪಕ್ಷದ ಕಚೇರಿಯಲ್ಲಿ ಗುರುವಾರ ಇಬ್ಬರಿಗೂ ಬಿ ಫಾರಂ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕೆಲವು ಹಿಂದುಳಿದ ಸಮುದಾಯ ಮತ್ತು ಅಲ್ಪಸಂಖ್ಯಾತ ಸಮುದಾಯದ ನಾಯಕರ ನಿವೃತ್ತಿಯ ಕಾರಣ ಹಾಗೂ ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಈ ಆಯ್ಕೆ  ಮಾಡಲಾಗಿದೆ. ವಿಧಾನಸಭೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ನಗರಸಭೆ ಸಹಿತ ಇತರ ಚುನಾವಣೆಗಳಲ್ಲಿ ಪಕ್ಷದ ಯುವ ಮತ್ತು ಸಕ್ರಿಯ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು’ ಎಂದರು.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು