ಸೋಮವಾರ, ಜನವರಿ 20, 2020
18 °C

ಡಿ.ಕೆ.ಶಿವಕುಮಾರ್‌ಗೆ ಮತ್ತೆ ಜಾರಿ ನಿರ್ದೇಶನಾಲಯ ಸಮನ್ಸ್ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮುಂದಿನ ವಾರ ವಿಚಾರಣೆಗೆ ಹಾಜರಾಗಬೇಕು ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಕಾಂಗ್ರೆಸ್‌ ಶಾಸಕ ಡಿ.ಕೆ ಶಿವಕುಮಾರ್‌ ಅವರಿಗೆ ಸಮನ್ಸ್ ಜಾರಿ ಮಾಡುವ ಸಾಧ್ಯತೆ ಇದೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿ ಕಳೆದ ಸೆಪ್ಟೆಂಬರ್‌ನಲ್ಲಿ ಬಂಧನಕ್ಕೆ ಒಳಗಾಗಿದ್ದ ಶಿವಕುಮಾರ್‌ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು. ಮತ್ತೆ ಅವರನ್ನು ವಿಚಾರಣೆಗೆ ಒಳಪಡಿಸುವ ನಿಟ್ಟಿನಲ್ಲಿ ಜನವರಿ 13ರಂದು ಇಲ್ಲಿನ ಖಾನ್‌ ಮಾರ್ಕೆಟ್‌ನಲ್ಲಿರುವ ಪ್ರಧಾನ ಕಚೇರಿಗೆ ಹಾಜರಾಗುವಂತೆ ಇ.ಡಿ. ಅಧಿಕಾರಿಗಳು ಸಮನ್ಸ್ ಜಾರಿ ಮಾಡಲು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ.

2013–14ನೇ ಸಾಲಿನಲ್ಲಿ ನಡೆಸಿರುವ ವ್ಯವಹಾರಗಳ ಕುರಿತು ಮಾಹಿತಿ ಒದಗಿಸುವಂತೆಯೂ ಇ.ಡಿ. ಅಧಿಕಾರಿಗಳು ಸೂಚಿಸಲಿದ್ದಾರೆ ಎಂದು ತಿಳಿದುಬಂದಿದೆ.

ವಿಚಾರಣೆ ಮುಂದಕ್ಕೆ: ಆದಾಯ ತೆರಿಗೆಗೆ ವಂಚನೆಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ದಾಖಕಲಿಸಿರುವ ಪ್ರಕರಣದಿಂದ ಸೆಕ್ಷನ್‌ 120 ‘ಬಿ’ ರದ್ದತಿ ಕೋರಿ ಡಿ.ಕೆ. ಶಿವಕುಮಾರ್‌ ಹಾಗೂ ಅವರ ಆಪ್ತ ಕಾರ್ಯದರ್ಶಿ ಆಂಜನೇಯ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಎರಡು ವಾರಕ್ಕೆ ಮುಂದೂಡಿದೆ.

ಸೋಮವಾರ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ತ್ರಿಸದಸ್ಯ ಪೀಠ, ಶಿವಕುಮಾರ್‌ ಅವರಿಗೆ ಸಂಬಂಧಿಸಿದಂತೆ ಇ.ಡಿ. ದಾಖಲಿಸಿರುವ ಪ್ರಕರಣದ ವಿಚಾರಣೆ ಇನ್ನೊಂದು ಪೀಠದಲ್ಲಿ ನಡೆದಿದೆ. ಎರಡೂ ಪ್ರಕರಣಗಳನ್ನು ಒಟ್ಟಾಗಿ ವಿಚಾರಣೆಗೆ ಒಳಪಡಿಸುವ ನಿಟ್ಟಿನಲ್ಲಿ ಎರಡು ವಾರಗಳ ನಂತರ ಪಟ್ಟಿ ಮಾಡಲು ಸೂಚಿಸಿತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು