ಶನಿವಾರ, ಏಪ್ರಿಲ್ 17, 2021
33 °C
ಶಾಸಕ ಬಸನಗೌಡ ಪಾಟೀಲ ಯತ್ನಾಳ

ರಾಜೀನಾಮೆ ಪತ್ರ ಹರಿಯಲು ಯತ್ನ|‘ಡಿಕೆಶಿ ಗೂಂಡಾ ವರ್ತನೆ,ಶಾಸಕರಿಗೆ ಭದ್ರತೆ ನೀಡಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಕಾಂಗ್ರೆಸ್‌– ಜೆಡಿಎಸ್‌ ಶಾಸಕರ ರಾಜೀನಾಮೆ ಪತ್ರ ಹರಿಯಲು ಪ್ರಯತ್ನಿಸುವ ಮೂಲಕ ಸಚಿವ ಡಿ.ಕೆ. ಶಿವಕುಮಾರ್‌ ಗೂಂಡಾ ವರ್ತನೆ ತೋರಿದ್ದಾರೆ. ಅವರ ಮೇಲೆ ಗೂಂಡಾಗಳನ್ನು ಬಿಟ್ಟು, ಹಲ್ಲೆ ಮಾಡಿಸುವ ಸಾಧ್ಯತೆ ಇದೆ. ರಾಜೀನಾಮೆ ನೀಡಿರುವ ಶಾಸಕರಿಗೆ ರಾಜ್ಯಪಾಲರು ಸೂಕ್ತ ಭದ್ರತೆ ಒದಗಿಸಬೇಕು’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಡಿ.ಕೆ. ಶಿವಕುಮಾರ್‌ ವಿರುದ್ಧ ನಾನು ಹಿಂದೊಮ್ಮೆ ಹೇಳಿದ್ದೆ. ಆಗ ಬೆಂಗಳೂರಿನಲ್ಲಿ ನನ್ನ ವಿರುದ್ಧ ಗೂಂಡಾಗಳನ್ನು ಬಿಟ್ಟು ಹಲ್ಲೆ ನಡೆಸಲು ಯತ್ನಿಸಿದ್ದರು. ಅವರ ಗೂಂಡಾ ವರ್ತನೆ ಇದೇ ರೀತಿ ಮುಂದುವರಿದರೆ ನಾವು ಅಧಿಕಾರಕ್ಕೆ ಬಂದಾಗ ಕ್ರಮಕೈಗೊಳ್ಳುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

‘ಶಾಸಕರ ರಾಜೀನಾಮೆಯಲ್ಲಿ ಬಿಜೆಪಿಯವರ ಕೈವಾಡ ಇಲ್ಲ. ಅವರಲ್ಲಿಯೇ ಅಸಮಾಧಾನ ಮೂಡಿ, ರಾಜೀನಾಮೆ ನೀಡುತ್ತಿದ್ದಾರೆ. ಒಬ್ಬರಾದ ಮೇಲೆ ಒಬ್ಬರು ಸರದಿಯಲ್ಲಿ ರಾಜೀನಾಮೆ ನೀಡುವುದನ್ನು ನೋಡಿದರೆ, ರಾಜ್ಯದಲ್ಲಿ ಬಿಜೆಪಿಯೊಂದೇ ಪಕ್ಷ ಉಳಿಯುವುದೇ ಎನ್ನುವ ಅನುಮಾನ ಕಾಡುತ್ತಿದೆ’ ಎಂದು ಛೇಡಿಸಿದರು.

‘ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಮೆರಿಕದಿಂದಲೇ ರಾಜ್ಯಪಾಲರಿಗೆ ಫ್ಯಾಕ್ಸ್‌ ಮೂಲಕ ರಾಜೀನಾಮೆ ಸಲ್ಲಿಸಲಿ’ ಎಂದರು.

* ಇವನ್ನೂ ಓದಿ...

ಕ್ಷಿಪ್ರ ಬೆಳವಣಿಗೆ| 12 ಶಾಸಕರಿಂದ ರಾಜೀನಾಮೆ ಸಲ್ಲಿಕೆ, ಶಾಸಕರಿಗೆ ಸಿಗದ ಸ್ಪೀಕರ್‌​

* ರಾಜೀನಾಮೆ ಪತ್ರ ಪಡೆದು ಸ್ವೀಕೃತಿ ನೀಡಲು ಸಿಬ್ಬಂದಿಗೆ ತಿಳಿಸಿದ್ದೇನೆ: ಸ್ಪೀಕರ್‌

ವಿಶ್ವಾಸ ಗಳಿಸುವಲ್ಲಿ ಸಿಎಂ ವಿಫಲ, 14 ಶಾಸಕರು ರಾಜೀನಾಮೆ ನೀಡಿದ್ದೇವೆ: ವಿಶ್ವನಾಥ್

ರಾಜ್ಯ ರಾಜಕೀಯ | ಗೋವಾ, ಮಹಾರಾಷ್ಟ್ರದ ರೆಸಾರ್ಟ್‌ನತ್ತ ರಾಜೀನಾಮೆ ನೀಡಿದ ಶಾಸಕರು​

ಮತ್ತೆ 10 ಶಾಸಕರಿಂದ ರಾಜೀನಾಮೆ ಪರ್ವ?

ರಾಜೀನಾಮೆ ಪರ್ವ | ಹೋಗುವವರನ್ನು ಹಿಡಿದುಕೊಳ್ಳಲು ಆಗಲ್ಲ: ಡಿ.ಕೆ.ಶಿವಕುಮಾರ್​

ರಾಜೀನಾಮೆ ನೀಡುತ್ತಿಲ್ಲ–ಸುಬ್ಬಾರೆಡ್ಡಿ ಸ್ಪಷ್ಟನೆ; ಪ್ರತಿಕ್ರಿಯೆಗೆ ಸಿಗದ ಸುಧಾಕರ್

ರಾಜೀನಾಮೆ ಸಲ್ಲಿಸಿದ ಕೆ.ಸಿ.ನಾರಾಯಣಗೌಡ ಮನೆಗೆ ಪೊಲೀಸ್ ಭದ್ರತೆ​

ಅತೃಪ್ತರ ಮನವೊಲಿಕೆಗೆ ಡಿಕೆಶಿ ಎಂಟ್ರಿಕೊಟ್ಟಿದ್ದಾರೆ, ಕಾದು ನೋಡೋಣ: ಸಿದ್ದರಾಮಯ್ಯ​

ರಾಜೀನಾಮೆ ಪರ್ವ | ರಾಜಭವನಕ್ಕೆ ತೆರಳಿದ 8 ಮಂದಿ ಶಾಸಕರು

ಸಿದ್ರಾಮು’ ಕಟ್ಟಿಹಾಕಲು ಗೌಡರ ‘ಪಟ್ಟು’

*  ಮದ್ದಿಲ್ಲದ ರೋಗ; ಮಧ್ಯಂತರ ರಾಗ​

ಈಗೇಕೆ ಸಿಡಿಯಿತು ದೇವೇಗೌಡರ ‘ಮಧ್ಯಂತರ ಚುನಾವಣೆ’ ಬಾಂಬ್

ಸಾಕಾಗಿದೆ, ಏನಾದರೂ ಮಾಡಿಕೊಳ್ಳಲಿ: ಸಿದ್ದರಾಮಯ್ಯ​

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು