ಶನಿವಾರ, ಫೆಬ್ರವರಿ 29, 2020
19 °C

ಡಿ.ಕೆ.ಶಿ ಬಂಧನ ವೇಳೆ ಪ್ರತಿಭಟನೆ: ₹82 ಕೋಟಿ ನಷ್ಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದ ವೇಳೆ ರಾಮನಗರ ಜಿಲ್ಲೆಯಲ್ಲಿ ನಡೆದ ಬಂದ್ ಮತ್ತು ಪ್ರತಿಭಟನೆಗಳಿಂದ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಅಂದಾಜು ₹82 ಕೋಟಿ ನಷ್ಟವಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಸಂಬಂಧ ಕನಕಪುರ ತಾಲ್ಲೂಕಿನ ರವಿಕುಮಾರ್ ಕೆಂಚನಹಳ್ಳಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ಕೆ.ನಾವದಗಿ, ‘2019ರ ಸೆಪ್ಟೆಂಬರ್‌ 4ರಿಂದ 11ರವರೆಗೆ ಜಿಲ್ಲೆಯ ವಿವಿಧೆಡೆ ನಡೆದ ಪ್ರತಿಭಟನೆಗಳಲ್ಲಿ ₹82 ಕೋಟಿ ನಷ್ಟವಾಗಿದೆ. 40 ಜನರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ’ ಎಂದರು.

ವಿಚಾರಣೆಯನ್ನು ಫೆಬ್ರುವರಿ 3ಕ್ಕೆ ಮುಂದೂಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು