ಸೋಮವಾರ, ಏಪ್ರಿಲ್ 12, 2021
25 °C

ರಾಜ್ಯದಲ್ಲಿ ನಮಗೆ ತಲೆ ಎತ್ತಿ ಓಡಾಡಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ: ಡಿಕೆಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಮಾಧ್ಯಮದವರು ನಮ್ಮನ್ನು ಕಳ್ಳರು ಎಂದು ಕರೆಯುತ್ತಿದ್ದಾರೆ. ತಲೆ ಎತ್ತಿ ಓಡಾಡಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಸಚಿವ ಡಿ.ಕೆ.ಶಿವಕುಮಾರ್ ವಿಧಾನಸಭೆಯಲ್ಲಿ ಮಂಗಳವಾರ ಅಳಲು ತೋಡಿಕೊಂಡರು.

ರಾಜಕಾರಣದ ತಾಜಾ ಅಪ್‌ಡೇಟ್ಸ್‌ಗೆ http://bit.ly/2yf5kax ಲಿಂಕ್ ಕ್ಲಿಕ್ ಮಾಡಿ

ವಿಶ್ವಾಸಮತ ಪ್ರಸ್ತಾವದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ‘ನನ್ನನ್ನು ಹೇಗಾದರೂ ಮಾಡಿ ಜೈಲಿಗೆ ಕಳುಹಿಸಬೇಕು ಎಂದು ಬಿಜೆಪಿ ಸಂಚು ಹೂಡುತ್ತಿದೆ. ​ಸದ್ಯದ ಪರಿಸ್ಥಿತಿಯಲ್ಲಿ ವಿಶ್ವಾಸಮತಕ್ಕೆ ಬೇಕಿರುವ ಅಂಕಿ–ಅಂಶಗಳಲ್ಲಿ ಏರುಪೇರಾಗಬಹುದು’ ಎಂದು ಆತಂಕ ವ್ಯಕ್ತಪಡಿಸಿದರು.

‘ಪಕ್ಷೇತರ ಶಾಸಕರು ಹೇಗೆ ನಮ್ಮ ವಿರುದ್ಧ ಕೈ ಎತ್ತುತ್ತಾರೋ ನೋಡ್ತೀವಿ, 5–6 ಗಂಟೆ ವೇಳೆಗೆ ಎಲ್ಲ ಮುಕ್ತಾಯವಾಗಲಿದೆ. ರಾಜ್ಯಕ್ಕೆ ಕೆಟ್ಟ ನಿದರ್ಶನವನ್ನು ನೀವು ಕೊಡುತ್ತಿದ್ದೀರಿ. ಇಂದು ನಮಗಾದ ಪರಿಸ್ಥಿತಿ ನಾಳೆ ನಿಮಗೂ ಆಗಬಹುದು. ಯಡಿಯೂರಪ್ಪ ಅವರ ಛಲವನ್ನು ಮೆಚ್ಚಲೇಬೇಕು ಎಂದು ವ್ಯಂಗ್ಯವಾಡಿದರು.

‘ಹೂಡಿಕೆ ಮಾಡಲು ಯಾರ್‍ಯಾರು ಬರುತ್ತಾರೋ ಅವರಿಗೆಲ್ಲ ನಮ್ಮ ಸರ್ಕಾರ ಅವಕಾಶ ಮಾಡಿಕೊಡಲಿದೆ. ಹೂಡಿಕೆ ಸೆಳೆಯುವುದು, ಉದ್ಯೋಗ ಸೃಷ್ಟಿಯೇ ನಮ್ಮ ಆದ್ಯತೆ. ಜಿಂದಾಲ್ ವಿಚಾರದಲ್ಲಿ ನನ್ನ ವೈಯಕ್ತಿಕ ಹಿತಾಸಕ್ತಿ ಏನೂ ಇಲ್ಲ. ಹೂಡಿಕೆ ಸೆಳೆಯುವ ಉದ್ದೇಶದಿಂದ ಒಪ್ಪಿಗೆ ಸೂಚಿಸಿದ್ದೆ ಅಷ್ಟೆ. ಆದರೂ ಲಂಚ ಪಡೆದಿದ್ದಾರೆ ಎಂದು ಸುಳ್ಳು ಆರೋಪ ಮಾಡಲಾಯಿತು’ ಎಂದು ಬೇಸರ ವ್ಯಕ್ತಪಡಿಸಿದರು.

‘ಪ್ರಜಾವಾಣಿ’ ಸುದ್ದಿ, ಬರಹಗಳಲ್ಲಿ ರಾಜಕೀಯ ಬೆಳವಣಿಗೆಗಳ ಸಮಗ್ರ ನೋಟ...  

ಪಾಕ್‌ ಪ್ರಧಾನಿ ಜತೆ ಬಿರಿಯಾನಿ ತಿನ್ನುವವರು ನೀವು: ಬಿಜೆಪಿಗೆ ತಿವಿದ ಯು.ಟಿ.ಖಾದರ್

ಅತೃಪ್ತ ಶಾಸಕರ ಪರ ಸ್ಪೀಕರ್‌ ಭೇಟಿಯಾದ ವಕೀಲ ಅಶೋಕ್ ಹಾರನಹಳ್ಳಿ

ವಿಶ್ವಾಸಮತ: ಕಲಾಪದಲ್ಲಿ ಭಾಗವಹಿಸಲು ಆಡಳಿತ ಪಕ್ಷದ ನಿರಾಸಕ್ತಿ?

ವಿಧಾನಸಭೆ ಕಲಾಪ ಆರಂಭ: ಸದನಕ್ಕೆ ಬಂದ ಸ್ಪೀಕರ್, ಬಿಜೆಪಿ ಶಾಸಕರು, ಮೈತ್ರಿ ನಾಪತ್ತೆ

ಸಿಎಂ ಕುಮಾರಸ್ವಾಮಿ ರಾಜೀನಾಮೆ ಪತ್ರ ನಕಲಿ? ಚರ್ಚೆಗೆ ಗ್ರಾಸ 

ರಾಜೀನಾಮೆ ಕೊಡಲು ಹೇಳ್ರಿ: ಸಿಎಂ ವಿರುದ್ಧ ಸಿದ್ದರಾಮಯ್ಯ ಪರೋಕ್ಷ ಸಿಡಿ ಮಿಡಿ 

ದೋಸ್ತಿಗೆ ಇನ್ನೂ ಸಿಗದ ‘ವಿಶ್ವಾಸ’; ಮತಕ್ಕೆ ಹಾಕಲು ಮಂಗಳವಾರ ಸಂಜೆ 6ರ ಗಡುವು 

ಕಾಯುವುದಷ್ಟೇ ಬಿಜೆಪಿ ಕಾಯಕ 

ಬಿರಿಯಾನಿ ತಿನ್ನದಿದ್ದರೆ ಹೇಗೆ: ಮುಖ್ಯಮಂತ್ರಿಗೆ ಸಭಾಧ್ಯಕ್ಷರ ಪ್ರಶ್ನೆ 

ರಾಜೀನಾಮೆ ಕೊಟ್ಟವರಿಗೂ ವಿಪ್‌ ಅನ್ವಯ; ಸ್ಪೀಕರ್ ರೂಲಿಂಗ್ 

‘ಬಿಜೆಪಿ ಕೈಯಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆಯ ರಕ್ತ’ 

ಇಂದು ವಿಚಾರಣೆಗೆ ಬರಲು ಸಾಧ್ಯವಿಲ್ಲ: ಅತೃಪ್ತ ‌ಶಾಸಕರಿಂದ ಸ್ಪೀಕರ್‌ಗೆ ಪತ್ರ 

ದೇವರ ವರ: ಇಬ್ಬರು ಮುಖ್ಯಮಂತ್ರಿ– ಎಚ್‌ಡಿಕೆ–ಬಿಎಸ್‌ವೈಗೆ ದೇವರ ಹೂ ಪ್ರಸಾದ 

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೊ: ಸದನದಲ್ಲಿ ಕಣ್ಣೀರಿಟ್ಟ ಲಿಂಬಾವಳಿ

ಸುಪ್ರೀಂಕೋರ್ಟ್ ಅಂಗಳದಲ್ಲಿ ಕರ್ನಾಟಕ ರಾಜಕಾರಣ: ಇಲ್ಲಿದೆ ಈವರೆಗಿನ ಸಮಗ್ರ ಮಾಹಿತಿ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.