ಬೆಂಗಳೂರು: 'ಬಸವಣ್ಣನವರ ನಾಡಿನಲ್ಲಿ ಹುಟ್ಟಿರುವುದು ನಮ್ಮೆಲ್ಲರ ಭಾಗ್ಯ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ನಗರದ ಬಸವ ಭವನದಲ್ಲಿ ಭಾನುವಾರ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

'ಬಸವಣ್ಣನವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯುತ್ತಾ, ಅವರ ನೀತಿ, ವಚನಗಳನ್ನು ನಾವು ಉಸಿರಾಡುತ್ತಿದ್ದೇವೆ' ಎಂದರು.
'12 ನೇ ಶತಮಾನದಲ್ಲಿ ಅನುಭವ ಮಂಟಪವನ್ನು ಸ್ಥಾಪಿಸಿ, ಪ್ರಜಾಪ್ರಭುತ್ವದಲ್ಲಿ ಸಂಸತ್ತಿನ ಪರಿಕಲ್ಪನೆಗೆ ಅಡಿಪಾಯ ಹಾಕಿಕೊಟ್ಟವರು ಬಸವಣ್ಣನವರು. ಅದೇ ಸಂಸತ್ ವ್ಯವಸ್ಥೆಯಲ್ಲಿ ನಾವೀಗ ಕೆಲಸ ಮಾಡುತ್ತಾ ಪ್ರಜಾಪ್ರಭುತ್ವವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ' ಎಂದರು.

ಇದನ್ನೂ ಓದಿ:ನನ್ನನ್ನು ಕೆಣಕಿ ಮರ್ಯಾದೆ ಕಳೆದುಕೊಳ್ಳಬೇಡಿ: ಸಚಿವ ಗೋಪಾಲಯ್ಯಗೆ ಡಿಕೆಶಿ ಎಚ್ಚರಿಕೆ

'ಬಸವಣ್ಣನವರ ಚಿಂತನೆ, ಕಾಂಗ್ರೆಸ್ ಚಿಂತನೆ. ಬಸವಣ್ಣನವರ ಪ್ರತಿ ಆದರ್ಶಗಳನ್ನು ಕಾಂಗ್ರೆಸ್ ಪಾಲನೆ ಮಾಡಿಕೊಂಡು ಬರುತ್ತಿದೆ. ಅದನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ನಾವು ನುಡಿದಂತೆ ನಡೆಯುತ್ತೇವೆ' ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.