ಬುಧವಾರ, ಫೆಬ್ರವರಿ 26, 2020
19 °C

ಸೈಬರ್‌ ಫೋರೆನ್ಸಿಕ್‌, ಡಿಎನ್‌ಎ ಪರೀಕ್ಷೆ ಲ್ಯಾಬ್‌ ಸ್ಥಾಪನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಆಯ್ದ ರಾಜ್ಯಗಳಲ್ಲಿ ಸೈಬರ್‌ ಫೋರೆನ್ಸಿಕ್‌ ಪ್ರಯೋಗಾಲಯ ಮತ್ತು ಡಿಎನ್‌ಎ ಪರೀಕ್ಷಾ ಪ್ರಯೋಗಾಲಯ ಸ್ಥಾಪನೆಗೆ ಕೇಂದ್ರ ಸರ್ಕಾರ ಮುಂದಾಗಿದೆ.

ಈ ಪ್ರಯೋಗಾಲಯಗಳನ್ನು ನಿರ್ಭಯಾ ನಿಧಿ ಅನುದಾನದ ನೆರವಿನಿಂದ ಸ್ಥಾಪಿಸಲಾಗುತ್ತಿದೆ. ಈ ಸಂಬಂಧ 410 ಸರ್ಕಾರಿ ವಕೀಲರು, ನ್ಯಾಯಿಕ ಅಧಿಕಾರಿಗಳು ಸೇರಿದಂತೆ ಒಟ್ಟು 3,664 ಸಿಬ್ಬಂದಿಗೆ ತರಬೇತಿ  ನೀಡಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.

₹131.09 ಕೋಟಿ ವೆಚ್ಚದಲ್ಲಿ 13 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿರುವ ಫೋರೆನ್ಸಿಕ್‌ ಪ್ರಯೋಗಾಲಯಗಳಲ್ಲಿ ಡಿಎನ್‌ಎ ಪರೀಕ್ಷೆಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ₹223.19 ಕೋಟಿ ವೆಚ್ಚದಲ್ಲಿ ಸೈಬರ್‌ ಫೋರೆನ್ಸಿಕ್‌ ಪ್ರಯೋಗಾಲಯ ಮತ್ತು ತರಬೇತಿ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ.

11,331: ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿ 2015ರಲ್ಲಿ ದಾಖಲಾದ ಪ್ರಕರಣಗಳು
12,187: ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿ 2016ರಲ್ಲಿ ದಾಖಲಾದ ಪ್ರಕರಣಗಳು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು