ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತ್ಯನಾರಾಯಣ ರಾವ್‌ ವಿರುದ್ಧ ಪ್ರಕರಣ: ‘ಬಲವಂತದ ಕ್ರಮ ಬೇಡ’

Last Updated 19 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ನಿವೃತ್ತ ಐಪಿಎಸ್‌ ಅಧಿಕಾರಿ ಎಚ್‌.ಎನ್‌.ಸತ್ಯನಾರಾಯಣ ರಾವ್‌ ವಿರುದ್ಧ ದಾಖಲಾಗಿರುವ ಪ್ರಕರಣ
ದಲ್ಲಿ, ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು’ ಎಂದು ಹೈಕೋರ್ಟ್ ಆದೇಶಿಸಿದೆ.

ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸತ್ಯನಾರಾಯಣ ರಾವ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಆರ್.ಎಸ್‌.ಚೌಹಾಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿ, ಮುಂದಿನ ವಿಚಾರಣೆವರೆಗೆ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ನಿರ್ದೇಶಿಸಿದೆ.

‘ಅರ್ಜಿದಾರರಿಗೆ ಏನಾದರೂ ಕಾನೂನು ಪರಿಹಾರದ ಅಗತ್ಯತೆ ಕಂಡುಬಂದಲ್ಲಿ ರಜಾಕಾಲದ ನ್ಯಾಯಪೀಠದ ಮುಂದೆ ಅರ್ಜಿ ಸಲ್ಲಿಸಬಹುದು’ ಎಂದೂ ನ್ಯಾಯಪೀಠ ಸ್ಪಷ್ಟಪಡಿಸಿದೆ.

‘ಭ್ರಷ್ಟಾಚಾರ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ನಾಯಕಿ ಶಶಿಕಲಾಗೆ ಕಾರಾಗೃಹ ಇಲಾಖೆ ಡಿಜಿಪಿ ಆಗಿದ್ದ ಎಚ್.ಎನ್.ಸತ್ಯನಾರಾಯಣ ರಾವ್‌ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಸೌಲಭ್ಯ ಒದಗಿಸಿದ್ದರು. ಇದಕ್ಕಾಗಿ ಅವರು ₹ 2 ಕೋಟಿ ಲಂಚ ಪಡೆದಿದ್ದಾರೆ’ ಎಂದು ಆರೋಪಿಸಿ ಆಗಿನ ಡಿಐಜಿ ಡಿ.ರೂಪಾ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಈ ವರದಿಗೆ ಪೂರಕವಾಗಿ ನಿವೃತ್ತ ಐಎಎಸ್‌ ಅಧಿಕಾರಿ ವಿನಯ್ ಕುಮಾರ್ ಸಮಿತಿ ವರದಿ ಕೊಟ್ಟಿದೆ. ಈ ವರದಿ ಆಧರಿಸಿ ಎಸಿಬಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT