ಭಾನುವಾರ, ಜುಲೈ 25, 2021
28 °C

ಆರ್ಥಿಕ ಸಮಸ್ಯೆ ಇದ್ದರೂ ವಿದ್ಯಾರ್ಥಿ ವೇತನ ನಿಲ್ಲಿಸಬೇಡಿ: ಬಿ.ಎಸ್‌.ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಆರ್ಥಿಕ ಸಮಸ್ಯೆ ಇದ್ದರೂ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಬಾರದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದಾಗ ಈ ಸೂಚನೆ ನೀಡಿದರು.

ಇಲಾಖೆಯ ಕಾರ್ಯಕ್ರಮ ಅನುಷ್ಠಾನದಲ್ಲಿ 2019-20ನೇ ಸಾಲಿನಲ್ಲಿ ಶೇ. 97 ರಷ್ಟು ಆರ್ಥಿಕ ಪ್ರಗತಿ ಸಾಧಿಸಲಾಗಿದೆ ಎಂದು ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ಮಾಹಿತಿ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿ ಪಡೆದ ಅಭ್ಯರ್ಥಿಗಳಲ್ಲಿ ಇಬ್ಬರು ಐಎಎಸ್, ಇಬ್ಬರು ಐಪಿಎಸ್, 13 ಅಭ್ಯರ್ಥಿಗಳು ಐಆರ್‌ಎಸ್‌ ಸೇವೆಗೆ ಆಯ್ಕೆಯಾಗಿರುವುದು ಸೇರಿದಂತೆ ಒಟ್ಟು 268 ಅಭ್ಯರ್ಥಿಗಳು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಯ್ಕೆಯಾಗಿ ವಿವಿಧ ಸೇವೆಗಳಿಗೆ ಸೇರ್ಪಡೆಯಾಗಿರುವ ಕುರಿತು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಇಲಾಖೆಯ ಕಾರ್ಯಕ್ರಮಗಳನ್ನು ಆದ್ಯತೆಗೆ ಅನುಸಾರ ಗುರುತಿಸಿ, ಅನುಷ್ಠಾನಗೊಳಿಸುವಂತೆಯೂ ಸೂಚಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು