ಶುಕ್ರವಾರ, ಡಿಸೆಂಬರ್ 6, 2019
20 °C

ಯಾರ ಪರವೂ ಪ್ರಚಾರ ಮಾಡಲ್ಲ: ಸುಮಲತಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ವಿಧಾನಸಭೆ ಉಪಚುನಾವಣೆಯಲ್ಲಿ ಯಾವ ಪಕ್ಷದ ಅಭ್ಯರ್ಥಿಯನ್ನೂ ಬೆಂಬಲಿಸುವುದಿಲ್ಲ’ ಎಂದು ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್ ಭಾನುವಾರ ಸ್ಪಷ್ಟಪಡಿಸಿದರು.

ನಟ, ನಿರ್ದೇಶಕ ಎಸ್.ನಾರಾಯಣ್ ಪುತ್ರ ಅಭಿನಯಿಸಲಿರುವ ಚಿತ್ರ ಮುಹೂರ್ತಕ್ಕೆ ಬಂದಿದ್ದ ಸಮಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ಹೋಗುವುದಿಲ್ಲ. ನನ್ನನ್ನು ಮಂಡ್ಯ ಜಿಲ್ಲೆಯ ಜನರು ಅಭಿವೃದ್ಧಿ ಕೆಲಸ ಮಾಡಲು ಆಯ್ಕೆ ಮಾಡಿದ್ದಾರೆ. ಹಾಗಾಗಿ ಪ್ರಚಾರಕ್ಕೆ ಹೋಗುತ್ತಿಲ್ಲ’ ಎಂದು ತಿಳಿಸಿದರು.

‘ಒಬ್ಬರ ಪರ ಪ್ರಚಾರ ಮಾಡಿದರೆ ಮತ್ತೊಬ್ಬರು ಅಸಮಾಧಾನಗೊಳ್ಳುತ್ತಾರೆ. ಯಾರಿಗೂ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ತಟಸ್ಥವಾಗಿ ಇರುತ್ತೇನೆ’ ಎಂದರು.

ಲೋಕಸಭೆ ಚುನಾವಣೆಗೆ ಸ್ವತಂತ್ರವಾಗಿ ಸುಮಲತಾ ಸ್ಪರ್ಧಿಸಿದ್ದಾಗ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಬೆಂಬಲ ಸೂಚಿಸಿತ್ತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು