ಭಾನುವಾರ, ಜುಲೈ 25, 2021
22 °C

ಜೋಡಿ ಕೊಲೆ: ರವಿ ಪೂಜಾರಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ ವಿರುದ್ಧದ ಎರಡು ಪ್ರಕರಣಗಳಲ್ಲಿ ನಗರದ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಹಲವು ವರ್ಷಗಳಿಂದ ತಲೆಮರೆಸಿಕೊಂಡು ಕಳೆದ ವರ್ಷವಷ್ಟೇ ಸೆನೆಗಲ್‌ನಲ್ಲಿ ಸೆರೆಸಿಕ್ಕಿದ್ದ ರವಿ ಪೂಜಾರಿಯನ್ನು ನಗರಕ್ಕೆ ಕರೆತಂದಿದ್ದ ಪೊಲೀಸರು, ಆತನ ವಿರುದ್ಧದ ಪ್ರಕರಣಗಳ ತನಿಖೆ ನಡೆಸುತ್ತಿದ್ದಾರೆ.

ತಿಲಕನಗರ ಠಾಣೆ ವ್ಯಾಪ್ತಿಯಲ್ಲಿದ್ದ ಶಬನಂ ಡೆವಲಪರ್ಸ್ ಕಚೇರಿಯಲ್ಲಿ ನಡೆದಿದ್ದ ಜೋಡಿ ಕೊಲೆ ಹಾಗೂ ವೈಟ್‌ಪೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ಬೆದರಿಕೆ ಹಾಕಿ ಕಿರುಕುಳ ನೀಡಿದ್ದ ಪ್ರಕರಣ ರವಿ ಪೂಜಾರಿ ಮೇಲಿತ್ತು. ಈ ಎರಡು ಪ್ರಕರಣದಲ್ಲಿ ಆತನ ವಿರುದ್ಧ ಇದೀಗ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

'ಎರಡು ಪ್ರಕರಣದಲ್ಲಿ ಮಾತ್ರ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಉಳಿದ ಪ್ರಕರಣಗಳ ತನಿಖೆ ಮುಂದುವರಿದಿದೆ' ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು