ಶನಿವಾರ, ಮೇ 30, 2020
27 °C

ಡಾ. ಚೆನ್ನವೀರ ಕಣವಿ ಅವರಿಗೆ ಪತ್ನಿ ವಿಯೋಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಧಾರವಾಡ: ಹಿರಿಯ ಕವಿ ಡಾ. ಚೆನ್ನವೀರ ಕಣವಿ ಅವರ ಪತ್ನಿ, ಲೇಖಕಿ ಶಾಂತಾದೇವಿ ಕಣವಿ (87) ಅವರು ಶುಕ್ರವಾರ ಸಂಜೆ ಬೆಳಗಾವಿಯಲ್ಲಿ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಇವರನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಇವರಿಗೆ ಪತಿ ಡಾ. ಚೆನ್ನವೀರ ಕಣವಿ, ಪುತ್ರಿ, ನಾಲ್ವರು ಪುತ್ರರು ಇದ್ದಾರೆ.

ಉತ್ತರ ಕರ್ನಾಟಕ ಭಾಷಾ ಶೈಲಿಯಲ್ಲಿ ಇವರು ಕಥೆಗಳು, ಲಲಿತ ಪ್ರಬಂಧ, ಮಕ್ಕಳ ಸಾಹಿತ್ಯಗಳನ್ನು ರಚಿಸಿದ್ದಾರೆ. ಇವರ ಬಯಲು–ಆಲಯ ಕಥಾಸಂಕಲನಕ್ಕೆ 1974ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ ದೊರೆತಿದೆ. 1987ರಲ್ಲಿ ಅಕಾಡೆಮಿಯ ಗೌರವ ಪ್ರಶಸ್ತಿ ದೊರೆತಿದೆ.

ಮೃತರ ಅಂತ್ಯಕ್ರಿಯೆ ಶನಿವಾರ ಧಾರವಾಡದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇದನ್ನೂ ಓದಿ... ಸಂಗೀತ ವಿದುಷಿ ಶ್ಯಾಮಲಾ ಜಿ.ಭಾವೆ ನಿಧನ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು