ಸೋಮವಾರ, ಆಗಸ್ಟ್ 19, 2019
24 °C

ಮುಖ್ಯಮಂತ್ರಿ ಯಡಿಯೂರಪ್ಪ ‌ಭೇಟಿಯಾದ ಬೇಗ್‌, ಸುಧಾಕರ್‌

Published:
Updated:

ಬೆಂಗಳೂರು: ಅನರ್ಹಗೊಂಡಿರುವ ಕಾಂಗ್ರೆಸ್‌ ಶಾಸಕರಾದ ಡಾ.ಕೆ.ಸುಧಾಕರ್‌ ಮತ್ತು ಆರ್‌.ರೋಷನ್‌ ಬೇಗ್‌ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಶನಿವಾರ ಭೇಟಿಯಾಗಿ ಚರ್ಚೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್‌, ‘ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ‌ಅನುದಾನ ನೀಡುವಂತೆ ಮನವಿ ಮಾಡಲಾಗಿದೆ. ಯಡಿಯೂರಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಬಿಜೆಪಿ ಸೇರ್ಪಡೆ ಕುರಿತು ಕ್ಷೇತ್ರದ ಜನರ ಜತೆ ಚರ್ಚಿಸಿ ತೀರ್ಮಾನ ಮಾಡುತ್ತೇನೆ’ ಎಂದು ಹೇಳಿದರು.

Post Comments (+)