ಕುಡಿಯುವ ನೀರು ಪೂರೈಕೆ: ಅಲ್ಪಾವಧಿ ಟೆಂಡರ್‌ಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

ಭಾನುವಾರ, ಮೇ 26, 2019
22 °C

ಕುಡಿಯುವ ನೀರು ಪೂರೈಕೆ: ಅಲ್ಪಾವಧಿ ಟೆಂಡರ್‌ಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

Published:
Updated:

ಬೆಂಗಳೂರು: ‘ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗಿರುವುದರಿಂದ ತುರ್ತಾಗಿ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲು  ಕಾರ್ಯಪಡೆಗಳನ್ನು ರಚಿಸಿ ಅನುದಾನ ಒದಗಿಸಲಾಗಿದೆ. ಈ ಕಾರ್ಯಪಡೆಗಳು ಸಮರೋಪಾದಿಯಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಂಡು ಅನುಷ್ಠಾನ ಮಾಡಬೇಕು’ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು.

ಬುಧವಾರ ಇಲ್ಲಿ ಇಲಾಖೆಯ ಉನ್ನತಾಧಿಕಾರಿಗಳ ಸಭೆ ನಡೆಸಿದ ಅವರು, ‘ಮತದಾನದ ನಂತರ ಅವಶ್ಯ ಕಾಮಗಾರಿಗಳಿಗೆ ಟೆಂಡರ್‌ ಕರೆದು ಕಾರ್ಯಾದೇಶ ನೀಡಲು ಹಾಗೂ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಚುನಾವಣಾ ಆಯೋಗ ಒಪ್ಪಿಗೆ ಸೂಚಿಸಿದೆ. ಹೀಗಾಗಿ, ತುರ್ತಾಗಿ ಅಲ್ಪಾವಧಿ ಟೆಂಡರ್‌ಗಳನ್ನು ಕರೆದು ಕುಡಿಯುವ ನೀರಿನ ಕಾಮಗಾರಿಗಳನ್ನು ಆರಂಭಿಸಬೇಕು’ ಎಂದು ನಿರ್ದೇಶನ ನೀಡಿದರು.

‘ರಾಜ್ಯದ 160 ತಾಲ್ಲೂಕುಗಳು ಬರಪೀಡಿತವಾಗಿವೆ. ಇಲ್ಲಿ ತುರ್ತಾಗಿ ನೀರು ಪೂರೈಕೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಇದರಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದರು.

ಬತ್ತಿ ಹೋದ ಕೊಳವೆಬಾವಿಗಳ ಸಾಮಗ್ರಿಗಳನ್ನು ಶೇಖರಿಸಿ ಹೊಸ ಕೊಳವೆಬಾವಿಗಳಿಗೆ ಬೇಕಾಗುವ ಪಂಪ್‌ಸೆಟ್, ಜಿಐ ಪೈಪ್‌ ಹಾಗೂ ಕೇಬಲ್‌ಗಳನ್ನು ಕಡ್ಡಾಯವಾಗಿ ಉಪಯೋಗಿಸಲು ಸೂಚಿಸಲಾಗಿದೆ. ಈ ಮೂಲಕ ಅನಗತ್ಯ ದುಂದುವೆಚ್ಚಕ್ಕೆ ಕಡಿವಾಣ ಹಾಕಲಾಗುತ್ತಿದೆ. ಇದರಲ್ಲಿ ಯಾವುದೇ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಯನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ’ ಎಂದು ಎಚ್ಚರಿಸಿದರು.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !