ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

27 ತಾಲ್ಲೂಕುಗಳು ಬರ ಪೀಡಿತ?

Last Updated 20 ಸೆಪ್ಟೆಂಬರ್ 2019, 19:41 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ವ್ಯಾಪಕವಾಗಿ ಮಳೆಯಾಗಿದ್ದರೂ, 12 ಜಿಲ್ಲೆಗಳ 27 ತಾಲ್ಲೂಕುಗಳಲ್ಲಿ ಮಳೆ ಕೊರತೆಯಾಗಿದೆ. ಹೀಗಾಗಿ ಇವುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಿಸುವ ನಿರೀಕ್ಷೆ ಇದೆ.

ತಾಲ್ಲೂಕುಗಳು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌, ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ, ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ನೆಲಮಂಗಲ, ರಾಮನಗರ ಜಿಲ್ಲೆಯ ಕನಕಪುರ, ರಾಮನಗರ, ಕೋಲಾರ ಜಿಲ್ಲೆಯ ಬಂಗಾರಪೇಟೆ, ಕೋಲಾರ, ಮಾಲೂರು, ಮುಳಬಾಗಿಲು, ಶ್ರಿನಿವಾಸಪುರ.

ತುಮಕೂರು ಜಿಲ್ಲೆಯ ಕೊರಟಗೆರೆ, ಪಾವಗಡ, ತುಮಕೂರು, ತುರುವೇಕರೆ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಚಿತ್ರದುರ್ಗ, ಮೊಳಕಾಲ್ಮೂರು, ದಾವಣಗೆರೆ ಜಿಲ್ಲೆಯ ಜಗಳೂರು, ರಾಯಚೂರು ಜಿಲ್ಲೆಯ ಮಾನ್ವಿ, ರಾಯಚೂರು, ಕಲಬುರ್ಗಿಜಿಲ್ಲೆಯ ಚಿಂಚೋಳಿ, ಬಾಗಲಕೋಟೆ ಜಿಲ್ಲೆಯಜಮಖಂಡಿ, ವಿಜಯಪುರ ಜಿಲ್ಲೆಯ ಇಂಡಿ ಹಾಗೂ ಗದಗ ಜಿಲ್ಲೆಯ ನರಗುಂದ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಗುರುತಿಸಲಾಗಿದೆ.

ಈ ತಾಲ್ಲೂಕುಗಳಲ್ಲಿ ಈ ತಿಂಗಳ ಅಂತ್ಯದವರೆಗೆ ಬರ ಪರಿಹಾರ ಕ್ರಮಮುಂದುವರೆಸಲು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT