86 ತಾಲ್ಲೂಕು‌ ಬರ ಘೋಷಣೆ ಸಾಧ್ಯತೆ

7
16 ಜಿಲ್ಲೆಗಳ 89 ತಾಲ್ಲೂಕುಗಳಲ್ಲಿ ಮುಂಗಾರು ಮಳೆ ಕೊರತೆ

86 ತಾಲ್ಲೂಕು‌ ಬರ ಘೋಷಣೆ ಸಾಧ್ಯತೆ

Published:
Updated:

ಬೆಂಗಳೂರು: ರಾಜ್ಯದ 16 ಜಿಲ್ಲೆಗಳ 89 ತಾಲ್ಲೂಕುಗಳಲ್ಲಿ ಮುಂಗಾರು ಮಳೆ ಕೊರತೆ ಉಂಟಾಗಿದೆ. ಈ ಪೈಕಿ ಕೇಂದ್ರ ಸರ್ಕಾರದ ಬರ ಘೋಷಣೆಗೆ ನಿಗದಿಪಡಿಸಿದ ಮಾನದಂಡಗಳ ಅನ್ವಯ, 86 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸರ್ಕಾರ ಸಿದ್ಧತೆ ನಡೆಸಿದೆ.

ಅದರಲ್ಲೂ 33 ತಾಲ್ಲೂಕುಗಳಲ್ಲಿ ತೀವ್ರ ಬರ ಪರಿಸ್ಥಿತಿ ಕಾಣಿಸಿಕೊಂಡಿದೆ ಎಂದು ಕಂದಾಯ ಇಲಾಖೆ ಮೂಲಗಳು ತಿಳಿಸಿವೆ.

ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಲಿರುವ ಸಂಪುಟ ಉಪ ಸಮಿತಿ ಸಭೆಯಲ್ಲಿ ಬರ ಪೀಡಿತ ತಾಲ್ಲೂಕುಗಳ ಘೋಷಣೆಯ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದೂ ಇಲಾಖೆಯ ಮೂಲಗಳು ತಿಳಿಸಿವೆ.

ಕೇಂದ್ರ ಕೃಷಿ ಸಚಿವಾಲಯ 2016ರಲ್ಲಿ ಹೊರಡಿಸಿದ ಮಾನದಂಡಗಳ ಅನ್ವಯವೇ ಬರಪೀಡಿತ ತಾಲ್ಲೂಕುಗಳನ್ನು ಪಟ್ಟಿ ಮಾಡಲಾಗಿದೆ. ಈ ಮಾನದಂಡಗಳ ಪ್ರಕಾರ ಶೇ 20ಕ್ಕೂ ಹೆಚ್ಚು ಮಳೆ ಕೊರತೆ, ವಾಡಿಕೆ ಬಿತ್ತ
ನೆಯ ಶೇ 75ರಷ್ಟು ಪ್ರದೇಶದಲ್ಲಿ ಕಡಿಮೆ ಬಿತ್ತನೆ, ಶೇ 50ರಷ್ಟು ತೇವಾಂಶ ಕೊರತೆ, ಜಲಾಶಯಗಳಲ್ಲಿರುವ ನೀರಿನ ಸಂಗ್ರಹ ಮತ್ತು ಅಂತರ್ಜಲ ಮಟ್ಟವನ್ನು ಪರಿಗಣಿಸಿ ಬರಪೀಡಿತ ತಾಲ್ಲೂಕುಗಳನ್ನು ಗುರುತಿಸಲಾಗುತ್ತದೆ. ಕರಾವಳಿ ಮತ್ತು ಮಲೆನಾಡು ಪ್ರದೇಶ ಹೊರತುಪಡಿಸಿದರೆ ಉಳಿದ ಎಲ್ಲ ಪ್ರದೇಶಗಳಲ್ಲಿ ಮಳೆ ಕೊರತೆ ಉಂಟಾಗಿದ್ದು, ಬರದ ಛಾಯೆ ಆವರಿಸಿದೆ. ಮಳೆ ಅಭಾವ ಎದುರಾದ ಪ್ರದೇಶಗಳಲ್ಲಿ ಸೆಟಲೈಟ್‌ ಆಧಾರಿತ ಬೆಳೆ ವಿಶ್ಲೇಷಣೆ ನಡೆಸಲಾಗಿದೆ. ಅದರ ಪ್ರಕಾರ, 74 ತಾಲ್ಲೂಕುಗಳಲ್ಲಿ ತೀವ್ರ ಪ್ರಮಾಣದಲ್ಲಿ ಮತ್ತು 45 ತಾಲ್ಲೂಕುಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬೆಳೆ ನಷ್ಟ ಉಂಟಾಗಿದೆ.

2018ರ ಆಗಸ್ಟ್‌ನ ಅಂತರ್ಜಲ ಬರ ಸೂಚ್ಯಂಕದ ಪ್ರಕಾರ 21 ತಾಲ್ಲೂಕುಗಳಲ್ಲಿ ಸಾಮಾನ್ಯ ಪ್ರಮಾಣದಲ್ಲಿ ಅಂತರ್ಜಲ ಮಟ್ಟ ಕುಸಿತ ಆಗಿದೆ. ಆದರೆ, ಒಂಬತ್ತು ತಾಲ್ಲೂಕುಗಳಲ್ಲಿ ವಿಪರೀತ ಹಾಗೂ ಐದು ತಾಲ್ಲೂಕುಗಳಲ್ಲಿ ಅತಿ ವಿಪರೀತ ಪ್ರಮಾಣದಲ್ಲಿ ನೀರಿನ ಮಟ್ಟ ಕೆಳಗೆ ಹೋಗಿದೆ.

ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆ ಸುರಿದರೆ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ಕೊರತೆ ಉಂಟಾಗಿದೆ.

ಬರಹ ಇಷ್ಟವಾಯಿತೆ?

 • 10

  Happy
 • 2

  Amused
 • 2

  Sad
 • 0

  Frustrated
 • 0

  Angry

Comments:

0 comments

Write the first review for this !