ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂರಕ್ಕೇರಿದ ಬರ ತಾಲ್ಲೂಕು

Last Updated 15 ಅಕ್ಟೋಬರ್ 2018, 18:50 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳ ಪಟ್ಟಿಗೆ ಮತ್ತೆ 14 ತಾಲ್ಲೂಕುಗಳು ಸೇರ್ಪಡೆಯಾಗಿವೆ. ಈ ಸಂಬಂಧ ಸೋಮವಾರ ಆದೇಶ ಹೊರಡಿಸಲಾಗಿದೆ.

86 ತಾಲ್ಲೂಕುಗಳನ್ನು ಬರಪೀಡಿತ ಎಂದು ಕಳೆದ ತಿಂಗಳು ಘೋಷಿಸಲಾಗಿತ್ತು. ಈಗ ಬರಪೀಡಿತ ತಾಲ್ಲೂಕುಗಳ ಸಂಖ್ಯೆ 100ಕ್ಕೆ ಏರಿದೆ.

ಕೇಂದ್ರ ಸರ್ಕಾರದ 2016ರ ಬರ ಕೈಪಿಡಿ ಹಾಗೂ ಪರಿಷ್ಕೃತ ಮಾರ್ಗಸೂಚಿಗಳಲ್ಲಿ ಕಡ್ಡಾಯಪಡಿಸಿರುವ ಅಂಶಗಳ ಪ್ರಕಾರ ಈ ತಾಲ್ಲೂಕುಗಳು ಸೇರ್ಪಡೆಯಾಗಿವೆ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ.

ಈ ತಾಲ್ಲೂಕುಗಳಲ್ಲಿ ಭೂರಹಿತ ಕಾರ್ಮಿಕರು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಒದಗಿಸಲಾಗುತ್ತದೆ. ಕುಡಿಯುವ ನೀರು ಪೂರೈಕೆ ಹಾಗೂ ಜಾನುವಾರುಗಳಿಗೆ ಮೇವು ಸರಬರಾಜಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.

***

ಹೊಸ ಸೇರ್ಪಡೆ

ಆನೇಕಲ್‌, ದೇವನಹಳ್ಳಿ, ದೊಡ್ಡಬಳ್ಳಾಪುರ, ತುರುವೇಕೆರೆ, ಹೊಳಲ್ಕೆರೆ, ಹೊಸದುರ್ಗ, ದಾವಣಗೆರೆ, ಜಗಳೂರು, ಪಾಂಡವಪುರ, ಔರಾದ್‌, ಬಸವಕಲ್ಯಾಣ, ಅಥಣಿ, ಬೀಳಗಿ, ಮುಧೋಳ.

***

14 ತಾಲ್ಲೂಕುಗಳಲ್ಲಿನ ಬೆಳೆ ಹಾನಿ ಬಗ್ಗೆ ಕೂಡಲೇ ಜಂಟಿ ಸಮೀಕ್ಷೆ ನಡೆಸಿ ಜಿಲ್ಲಾಧಿಕಾರಿಗಳು ವರದಿ ಸಲ್ಲಿಸಬೇಕು

-ಆರ್‌.ವಿ.ದೇಶಪಾಂಡೆ, ಕಂದಾಯ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT