ಗುರುವಾರ , ಸೆಪ್ಟೆಂಬರ್ 23, 2021
22 °C
ಬಿಎಸ್‌ವೈ ಅವರಿಂದ ಆ.5 ಅಥವಾ 6 ರಂದು ಪ್ರಧಾನಿ ಭೇಟಿ

ಬರ ಪರಿಹಾರ: ಹೆಚ್ಚು ಅನುದಾನಕ್ಕೆ ಬೇಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬರದಿಂದ ತತ್ತರಿಸಿರುವ ರಾಜ್ಯಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಕೋರಲು ಪ್ರಧಾನಿ ನರೇಂದ್ರಮೋದಿ ಅವರನ್ನು ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಬರ ಪರಿಸ್ಥಿತಿಯ ಬಗ್ಗೆ ಮಂಗಳವಾರ ನಡೆದ ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿಗಳ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಈ ಮಾಹಿತಿ ನೀಡಿದರು. ಇದಕ್ಕೆ ಪೂರ್ವಭಾವಿಯಾಗಿ ಆಗಸ್ಟ್‌ 2ರಂದು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಕರೆಯ ಲಾಗಿದೆ.

ಸಭೆಯಲ್ಲಿ ಮಾಹಿತಿ ಪಡೆದ ಬಳಿಕ ಆ. 5 ಮತ್ತು 6ರಂದು ದೆಹಲಿಗೆ ಹೋಗಿ ಪ್ರಧಾನಿ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ಇತರ ಸಚಿವರನ್ನು ಭೇಟಿ ಮಾಡಿ ಹೆಚ್ಚಿನ ಅನುದಾನ ಬಿಡುಗಡೆಗೆ ಮನವೊಲಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ 17 ರಿಂದ 18 ಜಿಲ್ಲೆಗಳಲ್ಲಿ ತೀವ್ರ ಮಳೆಯ ಕೊರತೆ ಇದೆ. ಜಲಾಶಯ ಗಳಲ್ಲೂ ಶೇ 30 ರಷ್ಟು ನೀರಿನ ಕೊರತೆ ಇದೆ. 15 ದಿನಗಳಲ್ಲಿ ಕೆರೆ–ಕಟ್ಟೆಗಳು ತುಂಬದೇ ಹೋದರೆ, ಪರಿಸ್ಥಿತಿ ಮತ್ತಷ್ಟು ಗಂಭೀರವಾಗಲಿದೆ ಎಂದರು. ಬರ ಪ್ರದೇಶಗಳಲ್ಲಿ ಕುಡಿ ಯುವ ನೀರಿನ ಪೂರೈಕೆಗೆ ಆದ್ಯತೆ ನೀಡ ಬೇಕು. ಮುಂಗಾರು ಹಂಗಾಮಿನ ಬಿತ್ತನೆ ಪ್ರಮಾಣ ಶೇ 53 ರಷ್ಟಾಗಿದೆ. ರೈತರು ಮತ್ತು ಜನ ಸಾಮಾನ್ಯರ ನೆರವಿಗೆ ಅಧಿ ಕಾರಿಗಳು ಧಾವಿಸಬೇಕು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು