ಬರ ಪರಿಸ್ಥಿತಿ: ಆರ್ಥಿಕ ವೃದ್ಧಿ ದರ ಕುಸಿತ

ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದಲ್ಲಿ (2018–19) ರಾಜ್ಯದ ಒಟ್ಟು ಆಂತರಿಕ ಉತ್ಪಾದನೆಯು (ಜಿಎಸ್‌ಡಿಪಿ) ಶೇ 9.6ರಷ್ಟಾಗಲಿದೆ.
ಹಿಂದಿನ ವರ್ಷದ ಶೇ 10.4ಕ್ಕೆ ಹೋಲಿಸಿದರೆ ವೃದ್ಧಿ ದರವು ಶೇ 0.8ರಷ್ಟು ಕಡಿಮೆಯಾಗಲಿದೆ. ಈ ವರ್ಷದ ಮುಂಗಾರು ಹಂಗಾಮಿನಲ್ಲಿ 100 ತಾಲ್ಲೂಕುಗಳಲ್ಲಿ ಬರದ ಪರಿಸ್ಥಿತಿ ಉದ್ಭವಿಸಿದ್ದರಿಂದ ಆರ್ಥಿಕ ವೃದ್ಧಿ ದರ ಹಿನ್ನಡೆ ಕಂಡಿದೆ. ಮಳೆ ಅಭಾವದಿಂದ ಕೃಷಿ ವಲಯದ ಪ್ರಗತಿಯು ಶೇ 4.8ರಷ್ಟು ಕುಸಿಯಲಿದೆ ಎಂದು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದ ಆರ್ಥಿಕ ಸಮೀಕ್ಷೆಯಲ್ಲಿ ತಿಳಿಸಲಾಗಿದೆ.
ಕೃಷಿ ವಲಯದಲ್ಲಿನ ಹಿನ್ನಡೆ ಹೊರತುಪಡಿಸಿದರೆ ಕೈಗಾರಿಕೆ, ನಿರ್ಮಾಣ, ವಿದ್ಯುತ್ ಮತ್ತಿತರ ಕ್ಷೇತ್ರಗಳಲ್ಲಿ ಪ್ರಗತಿ ಕಂಡು ಬರಲಿದೆ. ಸೇವಾ ವಲಯವು ಶೇ 12.3ರಷ್ಟು ಬೆಳವಣಿಗೆ ಕಾಣಲಿದೆ. ಶೇ 9.6ರಷ್ಟು ಇರಲಿರುವ ಆರ್ಥಿಕ ವೃದ್ಧಿ ದರದಲ್ಲಿ ವ್ಯಾಪಾರ, ವೃತ್ತಿಪರ ಸೇವೆ, ವಸತಿ ಯೋಜನೆಗಳ ಕೊಡುಗೆ ಶೇ 12.9ರಷ್ಟಿದೆ.
2011–12ರ ಸ್ಥಿರ ಬೆಲೆಗಳಲ್ಲಿ ‘ಜಿಜಿಡಿಪಿ’ಯು ₹ 10.82 ಲಕ್ಷ ಕೋಟಿಗಳಷ್ಟಾಗಲಿದೆ. ಪ್ರಸಕ್ತ ವರ್ಷದಲ್ಲಿ ಕೃಷಿ ಮತ್ತು ಕೈಗಾರಿಕಾ ವಲಯಗಳ ಕೊಡುಗೆಯು ಕ್ರಮವಾಗಿ ಶೇ 10.11 ಮತ್ತು ಶೇ 22.01ಕ್ಕೆ ಇಳಿಯಲಿದೆ.ಸೇವಾ ವಲಯದ ಕೊಡುಗೆಯು ಶೇ 67.87ಕ್ಕೆ ಹೆಚ್ಚಳಗೊಳ್ಳಲಿದೆ.
* ಇವನ್ನೂ ಓದಿ...
* ಸಣ್ಣ ನೀರಾವರಿ, ಅಂತರ್ಜಲ ವೃದ್ಧಿಗೆ ಆದ್ಯತೆ
* ‘ಉಕ್ಕುವ ಹಾಲಿಗೆ ನೀರು ಚಿಮುಕಿಸಿದಂತೆ’
* ಅನ್ನದಾತನಿಗೆ ಹತ್ತಾರು ಯೋಜನೆ, ರಾಜ್ಯದಲ್ಲಿ ಪ್ರತ್ಯೇಕ ಬೆಳೆ ವಿಮೆ ಯೋಜನೆ
* ಉದ್ಯಮ ವಲಯಕ್ಕೆ ಉತ್ತೇಜಕ ಬುತ್ತಿ
* ಬಜೆಟ್: ಪರಿಶಿಷ್ಟ ವರ್ಗಕ್ಕೆ ಭರ್ಜರಿ ಕೊಡುಗೆ
* ಸರ್ಕಾರ ಜನರ ಕಣ್ಣಿಗೆ ಮಣ್ಣೆರಚಿದೆ: ಯಡಿಯೂರಪ್ಪ
* ಸಾಲ ಮನ್ನಾಕ್ಕೆ ಇನ್ನೂ ಹಣ ಕೊಡುವೆ: ಕುಮಾರಸ್ವಾಮಿ
* ಬೆಂಗಳೂರೇ ಮೊದಲು; ಉಳಿದವು ನಂತರ...
* ಪ್ರತಿಭಟನೆ ಮಧ್ಯೆಯೇ ಬಜೆಟ್ ಭಾಷಣ
* ಬಜೆಟ್‌ನಲ್ಲಿ ಜಿಲ್ಲಾವಾರು ಹಂಚಿಕೆ; ಸಮತೋಲನದ ಸರ್ಕಸ್
* ಬರ ಪರಿಸ್ಥಿತಿ: ಆರ್ಥಿಕ ವೃದ್ಧಿ ದರ ಕುಸಿತ
* ವಿಶ್ವವಿಖ್ಯಾತ ತಾಣವಾಗಿ ಬಾದಾಮಿ ಅಭಿವೃದ್ಧಿ
* ಸ್ವಾಮೀಜಿ ಊರುಗಳಲ್ಲಿ ಸಾಂಸ್ಕೃತಿಕ ಕೇಂದ್ರಗಳು
* ಹೊಸ ಕ್ರೀಡಾ ವಸತಿ ನಿಲಯಗಳ ಘೋಷಣೆ
* ಆರೋಗ್ಯ ಮತ್ತು ಕುಟುಂಬ ಕಲ್ಯಾಣಕ್ಕೆ ಆದ್ಯತೆ
* ‘ಮಾತೃಶ್ರೀ’ ಯೋಜನೆ ಸಹಾಯಧನ ಹೆಚ್ಚಳ
* ಆನ್‌ಲೈನ್ ಮೂಲಕ ಸಿಇಟಿ, ವಿದ್ಯಾರ್ಥಿಗಳಿಗೆ ಡಿಜಿಟಲ್ ಅಂಕಪಟ್ಟಿ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.